ಶಿಕ್ಷಕ ಸಾವಳಸಂಗರಿಗೆ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ
ವಿಜಯಪುರ,ಸೆ.8: ಕರ್ನಾಟಕ ಸರ್ಕಾರ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹೆಸರಿನಲ್ಲಿ ಸೆ.5 ರಂದು ನೀಡುವ 2024-25ನೇ ಸಾಲಿನ ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿಯನ್ನು ಬೆಂಗಳೂರಿನ ವಿಧಾನಸೌಧ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸಿದ್ದಪ್ಪ ಭೀಮಪ್ಪ ಸಾವಳಸಂಗ ಇವರಿಗೆ ಪ್ರದಾನ ಮಾಡಲಾಯಿತು.
ವಿಜಯಪುರದ ಬಾಲಿಕೆಯರ ಸರಕಾರಿ ಪದವಿಪೂರ್ವ ಕಾಲೇಜ್‍ನಲ್ಲಿ ಹಿರಿಯ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಬಿ. ಸಾವಳಸಂಗ, ಅವರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಶಾಸಕರು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು ಎಂದು ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜ್‍ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.