ಕಾನೂನು ಕ್ರಮ
ಲಕ್ಷ್ಮೇಶ್ವರ,ಸೆ.8:ಪಟ್ಟಣದಲ್ಲಿ ಶುಕ್ರವಾರ ಪೆÇಲೀಸರು ದ್ವಿಚಕ್ರ ವಾಹನ ಸವಾರರಿಗೆ ಬಿಸಿ ಮುಟ್ಟಿಸುವ ಕಾರ್ಯಚರಣೆಯನ್ನು ಕೈಗೊಂಡರು.
ಪಟ್ಟಣದಲ್ಲಿ ತ್ರಿಬಲ್ ರೈಡಿಂಗ್ ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸುವುದು ದೋಷಪೂರಿತ ಪ್ಲೇಟು ನಂಬರ್ ಇಲ್ಲದ ಮೋಟರ್ ಸೈಕಲ್ ಹೀಗೆ ಕಾನೂನುಬಾಹಿರ ಸವಾರರಿಗೆ ಬಿಸಿ-ತಟ್ಟಿಸಿದರು.
ಪೆÇಲೀಸ್ ವರಿಷ್ಠಾಧಿಕಾರಿ ಬಿ ಎಸ್ ನೇಮಗೌಡ ಅವರ ಮಾರ್ಗದರ್ಶನದಲ್ಲಿ ಸಿಪಿಐ ನಾಗರಾಜ್ ಮಾಡಳ್ಳಿ ಪಿಎಸ್‍ಐ ಈರಣ್ಣ ರಿತ್ತಿ ಅವರು ಸುಮಾರು ಐವತ್ತಕ್ಕೂ ಹೆಚ್ಚು ಮೋಟರ್ ಸೈಕಲ್ ಗಳ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು ವಾಹನ ಸವಾರರಿಂದ ದಂಡ ವಸೂಲಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಸಿಪಿಐ ನಾಗರಾಜ್ ಮಾಡಳ್ಳಿ ಅವರು ಹೆಚ್ಚುತ್ತಿರುವ ಅಪಘಾತಗಳಿಗೆ ನ್ಯೂನ್ಯತೆ ಉಳ್ಳ ಪ್ಲೇಟುಗಳು ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಒಟ್ಟಾರೆ ಸಂಚಾರ ನಿಯಮಗಳನ್ನು ಪಾಲಿಸದೆ ಇರುವುದು ಅಪಘಾತಗಳು ಕಾರಣವಾಗಿದ್ದು ಈ ನಿಟ್ಟಿನಲ್ಲಿ ಇಲಾಖೆ ಕಾರ್ಯಾಚರಣೆ ಕೈಗೊಂಡಿದೆ ಎಂದು ಹೇಳಿದರು ಜನರಲ್ಲಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುವುದು ಸಂಚಾರ ನಿಯಮಗಳನ್ನು ಪಾಲಿಸದಿರುವುದರಿಂದ ಅನೇಕ ಅವಘಡಗಳು ಸಂಭವಿಸುತ್ತಿವೆ ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಮೂಲ ಉದ್ದೇಶವಾಗಿದೆ ಎಂದು ಹೇಳಿದರು.