ಉದ್ಯೋಗ ಮೇಳ ಸದ್ಬಳಕೆಗೆ ಕರೆ
ಕೋಲಾರ,ಸೆ೮:ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅವರಣದಲಿ ಸೆ,೧೩ರ ಶುಕ್ರವಾರ ಬೆಳಿಗ್ಗೆ ೧೦ ರಿಂದ ಸಂಜೆ ಗಂಟೆಯವರೆಗೆ ಹಮ್ಮಿ ಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ತಿಳಿಸಿದರು,
ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ನಿರುದ್ಯೋಗಿಗಳಿಗೆ ಅನುವು ಮಾಡಿ ಕೊಡುವ ದೆಸೆಯಲ್ಲಿ ಉದ್ಯೋಗ ಮೇಳವನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ,ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್, ಹಾಗೂ ರಾಜ್ಯ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಸೂಚನೆ ಮೇರೆಗೆ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುತ್ತಿದೆ. ನಿರುದ್ಯೋಗಿಗಳು ಈ ಅವಕಾಶವನ್ನು ಸದ್ಬಳಿಸಿ ಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗ ಬೇಕೆಂದು ಆಶಿಸಿದರು,
ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಸುಮಾರು ೫೦ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದೆ. ಎಸ್,ಎಸ್.ಎಲ್.ಸಿ. ಪಿ.ಯು.ಸಿ. ಪದವಿ, ಐ.ಟಿ.ಐ. ಡಿಪ್ಲೋಮು, ಸ್ನಾತಕೋತ್ತರ ವ್ಯಾಸಂಗ ಮಾಡಿರುವಂತ ನಿರುದ್ಯೋಗಿಗಳು ಅಗತ್ಯವಾದ ದಾಖಲಾತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಿ ಸಿಕ್ಕಿರುವ ಅವಕಾಶವನ್ನು ಸದ್ಬಳಿಸಿ ಕೊಳ್ಳ ಬೇಕೆಂದು ಕರೆ ನೀಡಿದರು.
ಉದ್ಯೋಗಾಕಾಂಕ್ಷಿಗಳು ನೊಂದಣಿ ಮಾಡಿಸಿ ಕೊಳ್ಳಲು ಯಾವೂದೇ ಶುಲ್ಕವನ್ನು ಪಾವತಿಸುವಂತಿಲ್ಲ ಹೆಚ್ಚಿನ ವಿವರಗಳಿಗೆ ೯೯೬೪೩ ೫೫೬೧೯ ಅಥವಾ ೯೬೧೧೧ ೨೮೫೨೨ ಸಂಖ್ಯೆಯನ್ನು ಸಂರ್ಪಕಿಸಿ ಪಡೆದು ಕೊಳ್ಳಬಹುದಾಗಿದೆ. ಸಚಿವರಾದ ಕೆ.ಹೆಚ್,ಮುನಿಯಪ್ಪ ಅವರ ಸೂಚನೆ ಮೇರೆಗೆ ಅವರಿಗೆ ಕೋಲಾರ ಕ್ಷೇತ್ರದ ಮೇಲಿನ ಕಾಳಜಿಯಿಂದಾಗಿ ನಿರುದ್ಯೋಗಿಗಳಿಗೆ ಉದ್ಯೋಗದ ಅವಕಾಶ ಕಲ್ಪಿಸುವ ದೆಸೆಯಲ್ಲಿ ಪತ್ರಿಕಾ ಗೋಷ್ಟಿ ಮೂಲಕ ಮಾಹಿತಿ ನೀಡಬೇಕೆಂದು ಸೊಚಿಸಿರುವುದರಿಂದ ಜಿಲ್ಲಾ ಕಾಂಗ್ರೇಸ್ ಪಕ್ಷದ ವತಿಯಿಂದ ಮಾಹಿತಿ ನೀಡಲಾಗುತ್ತಿದೆ ಎಂದರು.
ಜಿಲ್ಲಾ ಕಾಂಗ್ರೇಸ್ ಉಪಾಧ್ಯಕ್ಷ ಎಲ್.ಎ.ಮಂಜುನಾಥ್ ಅವರು ಮಾತನಾಡಿ ಮೊನ್ನೆ ನಡೆದ ನಗರಸಭೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಆಸಕ್ತಿವಹಿಸಿ ನೇತ್ರತ್ವ ವಹಿಸಿದ್ದ ಹಿನ್ನಲೆಯಲ್ಲಿ ನಗರಸಭೆ ಆಡಳಿತ ಚುಕ್ಕಾಣಿ ಕಾಂಗ್ರೇಸ್ ವಶಕ್ಕೆ ಬಂದಿದೆ, ಕಾಂಗ್ರೇಸ್ ಪಕ್ಷದ ಬೆಂಬಲಿತ ಅಧ್ಯಕ್ಷ ಉಪಾಧ್ಯಕ್ಷರಿಗೆ ಸಹಕಾರ ನೀಡಿದ ಎಲ್ಲಾ ನಗರಸಭಾ ಸದಸ್ಯರಿಗೂ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಕುಡಾ ಮಾಜಿ ಅಧ್ಯಕ್ಷ ಅಥಾವುಲ್ಲಾ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಪ್ರಸಾದ್ ಬಾಬು, ಎಸ್.ಸಿ.ಘಟಕದ ಜಿಲ್ಲಾಧ್ಯಕ್ಷ ಜಯದೇವ್, ಶ್ರೀ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ತ್ಯಾಗರಾಜ್, ಕ್ರೈಸ್ತ ಸಮುದಾಯದ ಮುಖಂಡ ಸುದೀರ್ ಉಪಸ್ಥಿತರಿದ್ದರು,