ಕರಾಟೆಯಲ್ಲಿ ಗೋದುತಾಯಿ ವಿದ್ಯಾರ್ಥಿನಿಗೆ ಚಿನ್ನದ ಪದಕ
ಕಲಬುರಗಿ:ಸೆ.6: ಮೈಸೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದ ಬಿ.ಎ ವಿದ್ಯಾರ್ಥಿನಿ ಕು.ದಾಮಿನಿ ನಿಂಬಾಳ್ಕರ್ ಚಿನ್ನದ ಪದಕ ಪಡೆದಿದ್ದಾರೆ.
ಆಲ್ ಇಂಡಿಯಾ ಶಿಟೋರಿಯು ಕರಾಟೆ ಡೋ ಯುನಿಯನ್ ಅವರು ನಡೆಸಿದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯು ಈ ಸಾಧನೆ ಮಾಡಿದ್ದಾಳೆ.
ವಿದ್ಯಾರ್ಥಿನಿಯ ಈ ಸಾಧನೆಯನ್ನು ಮೆಚ್ಚಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪ , ಚೇರಮನ್ ಪೂಜ್ಯ ಡಾ.ದಾಕ್ಷಾಯಣಿ ಎಸ್.ಅಪ್ಪ ಮತ್ತು ಕಾರ್ಯದರ್ಶಿ ಬಸವರಾಜ ದೇಶಮುಖ ಅವರು ಶ್ಲಾಘಿಸಿದ್ದಾರೆ. ಮಹಾವಿದ್ಯಾಲಯದ ಪ್ರಚಾರ್ಯೆ ಡಾ.ಪುಟ್ಟಮಣಿ ದೇವಿದಾಸ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಮಿಲಿಂದ ಸುಳ್ಳದ ಅಲ್ಲದೆ ಮಹಾವಿದ್ಯಾಲಯದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.