ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತಾ ಸೇವಾ ಕಾರ್ಯಕ್ರಮ ಹಾಗೂ ನಾನ್ ಕ್ಲಿನಿಕಲ್ ಸಿಬ್ಬಂದಿಗಳಿಗೆ ಸನ್ಮಾನ
ವಿಜಯಪುರ,ಅ.3:ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆಯು ಪ್ರಮುಖ ಪಾತ್ರ ವಹಿಸುತ್ತದೆ. ಪ್ರತಿಯೊಂದು ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಿದರೆ ರೋಗಗಳನ್ನು ನಿಯಂತ್ರಣ ಮಾಡಲು ಸಾಧ್ಯವಿದೆ ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಹೇಳಿದರು ಜಿಲ್ಲಾ ಆಸ್ಪತ್ರೆಯಲ್ಲಿ ಸೆಪ್ಟಂಬರ್ 9 ರಿಂದ ಅಕ್ಟೋಬರ್ 2 ನೇ ತಾರೀಖಿನವರೆಗೆ ಸ್ವಚ್ಛತಾ ಸೇವಾ ಆಂದೋಲನದ ನಿಮಿತ್ತ ಸ್ವಚ್ಛತಾ ಕಾರ್ಯಕ್ರಮ ಹಾಗೂ ಜಿಲ್ಲಾ ಆಸ್ಪತ್ರೆಯ ನಾನ್ ಕ್ಲಿನಿಕಲ್ ಸಿಬ್ಬಂದಿಗೆ ಸನ್ಮಾನ ನೆರವೇರಿಸಿ ಮಾತನಾಡಿದರು
ಪ್ರತಿಯೊಬ್ಬರು ವೈಯಕ್ತಿಕ ಸ್ವಚ್ಛತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿಯ ಸ್ವಚ್ಛತೆ ಕಾಪಾಡಿಕೊಂಡು ಮಹಾತ್ಮಾ ಗಾಂಧೀಜಿಯವರು ಕಂಡಂತಹ ಕನಸನ್ನು ನನಸು ಮಾಡಲು ಕೈಜೋಡಿಸಬೇಕಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಎಲ್ಲೆಂದರಲ್ಲಿ ಗುಟಕಾ ತಂಬಾಕು ಮಾದಕ ವಸ್ತುಗಳನ್ನು ಉಪಯೋಗಿಸುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಅಂತವರ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದು ಅನಿವಾರ್ಯವಾಗಿದೆ. ಆಸ್ಪತ್ರೆಗಳಿಗೆ ಬರುವ ಜನರ ಜೇಬುಗಳನ್ನು ಚೆಕ್ ಮಾಡಿ ಒಳಗೆ ಪ್ರವೇಶ ನೀಡುವುದು ಅನಿವಾರ್ಯವಾಗಿದೆ. ಇಲ್ಲದಿದ್ದರೆ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಪ್ರೇರೇಪಿಸಿದಂತಾಗುತ್ತದೆ. ನಮ್ಮ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನಾನ್ ಕ್ಲಿನಿಕಲ್ ಸಿಬ್ಬಂದಿಗಳು ಅತ್ಯಂತ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ನಮ್ಮ ಆಸ್ಪತ್ರೆಯ ಸ್ವಚ್ಛತೆಯನ್ನು ಕಾಪಾಡಲು ಅನುಕೂಲವಾಗಿದೆ. ಆದಕಾರಣ ನಾನ್ ಕ್ಲಿನಿಕಲ್ ಸಿಬ್ಬಂದಿಗಳ ಸೇವೆ ಪ್ರಶಂಸೆನೀಯವಾದದ್ದು ಎಂದು ಹೇಳಿದರು
ಸ್ವಚ್ಛತೆ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಡಾ. ಶಶಿಕಲಾ ಹಿರೇಮನಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಸಂತೋಷ್ ಶಾಹಾಪುರ. ಜಿಲ್ಲಾ ಕ್ಷಯ, ಹೆ???ವಿ ಕಾರ್ಯಕ್ರಮ ಅಧಿಕಾರಿ ಡಾ. ಎಂ.ಬಿ. ಬಿರಾದಾರ. ಡಾ. ಗುಂಡಪ್ಪ, ಡಾ. ಸುರೇಶ ಚವಾಣ, ಡಾ. ಸಂದೀಪ ಸಜ್ಜನ, ಡಾ. ಮಹೇಶ ಮೋರೆ, ಡಾ. ಹಾವಿನಾಳ ಡಾ. ಚಂದರಗಿ ಸಾಯಿನಾಥ್ ಏಜೆನ್ಸಿಯ ಮನೋಹರ ಗ್ರೇಡ್ ಒನ್ ಮೋಮಿನ, ಡಾ. ಮೀನಾಕ್ಷಿ, ಡಾ. ತಿಮ್ಮಾಪುರ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ, ಆಧೀಕ್ಷಕ ತಾಂಬೋಳಿ, ಉಮೇಶ ವಸ್ತ್ರದ, ಜಿಲ್ಲಾ ಆಸ್ಪತ್ರೆಯ ಇತರೆ ವೈದ್ಯರು, ಅಧಿಕಾರಿಗಳು ಮೇಲ್ವಿಚಾರಕರು ಉಪಸ್ಥಿತರಿದ್ದರು.