ಗಂಡನಿಂದಲೇ ಹೆಂಡತಿಯ ಬರ್ಬರ ಹತ್ಯೆ
ಕಲಬುರಗಿ,ಅ.3: ಕುಡಿದ ಮತ್ತಿನಲ್ಲಿ ಇಟ್ಟಿಗೆಯಿಂದ ಹೊಡೆದು ಗಂಡನೇ ಹೆಂಡತಿಯನ್ನು ಕೊಲೆ ಮಾಡಿದ ದಾರುಣ ಘಟನೆ ನಗರ ಹೊರವಲಯದ ಶಹಬಾದ್ ರಸ್ತೆಯ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ.
ಪ್ರಿಯಾಂಕಾ ರಾಠೋಡ್( 35 )ಕೊಲೆಯಾದ ಮಹಿಳೆ. ಮೃತ ಮಹಿಳೆಯ ಪತಿ ವಕೀಲ್ ರಾಠೋಡ್ ದುಷ್ಕøತ್ಯ ಎಸಗಿ ಪರಾರಿಯಾಗಿದ್ದಾನೆ.ರಾತ್ರೋ ರಾತ್ರಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಬುಧವಾರ ರಾತ್ರಿ ಗಂಡ ಹೆಂಡತಿ ಇಬ್ಬರು ಸೇರಿ ಮದ್ಯಪಾನ ಮಾಡಿದ್ದಾರೆ.ನಂತರ ಇಬ್ಬರ ಮಧ್ಯೆ ಜಗಳ ಶುರುವಾಗಿದೆ. ಜಗಳ ವಿಕೋಪಕ್ಕೆ ತೆರಳಿ ಗಂಡ ಹೆಂಡತಿಗೆ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಶ್ವವಿದ್ಯಾಲಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ ಜಿಲ್ಲೆ ಅಳಂದ ತಾಲ್ಲೂಕಿನ ಕೂಡಲಹಂಗರಗಾ ಗ್ರಾಮದ ನಿವಾಸಿ ಪ್ರಿಯಾಂಕಾ
ಮತ್ತು ನಿಂಬರ್ಗಾ ತಾಂಡಾದ ನಿವಾಸಿ ವಕೀಲ ರಾಠೋಡ್ ಕಳೆದ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು.ನಗರ ಹೊರವಲಯದ ಶಹಬಾದ್ ರಸ್ತೆಯ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡಿಕೊಂಡಿದ್ದರು.