ರೈತರು ಆಧುನಿಕ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ ಶಾಸಕ ಲಕ್ಷ್ಮಣ ಸವದಿ ಸಲಹೆ
ಅಥಣಿ : ಅ.6:ಆಧುನಿಕ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ಪಾದನೆ ಹೆಚ್ಚಿಸಿಕೊಳ್ಳುವ ಮೂಲಕ ರೈತರು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ತಾಲೂಕಿನ ಕೊಕಟನೂರ ಗ್ರಾಮದಲ್ಲಿ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಬೀಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು
ರೈತರು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಬೇಕು ಪ್ರತಿಯೊಬ್ಬ ರೈತರು ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿದಲ್ಲಿ ಉತ್ತಮ ಬೆಳೆ ಬೆಳೆದು ಭೂಮಿಯ ಫಲವತ್ತತೆ ಕಾಯ್ದುಕೊಳ್ಳಬೇಕು ಎಂದ ಅವರು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರೈತರ ಸಂಪರ್ಕಕ್ಕೆ ಸಿಗುವಂತಾಗಬೇಕು ಅಧಿಕಾರಿಗಳ ಜತೆ ರೈತರು ನೇರವಾಗಿ ಸಂಪರ್ಕ ಹೊಂದಿರಬೇಕು. ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಅಧಿಕಾರಿಗಳು ರೈತರ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸಬೇಕು ಈ ಹಂಗಾಮಿಗೆ ಬೇಕಾದ ಗುಣಮಟ್ಟದ ಬೀಜದ ದಾಸ್ತಾನು ಮಾಡಿಕೊಳ್ಳಬೇಕು ಬೀಜಗಳ ವಿತರಣೆಯಲ್ಲಿ ಯಾವುದೇ ರೀತಿಯ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ಗ್ರಾಮದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸುಮಾರು 80 ಲಕ್ಷ ರೂಗಳ ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಿ.ಕೆ.ಪಿ.ಎಸ್ ಅಧ್ಯಕ್ಷ ಅಣ್ಣಪ್ಪ ಖೋತ, ಉಪಾಧ್ಯಕ್ಷ ಸಂಗಪ್ಪ ಅಡಹಳ್ಳಿ ,ಗ್ರಾಮ ಪಂಚಾಯತ ಅಧ್ಯಕ್ಷ ಶಾನಕ್ಕಾ ಪೂಜಾರಿ, ಮುಖಂಡರಾದ ಗುರುಮೂರ್ತಯ್ಯ ಕಾಡದೇವರಮಠ, ಶ್ಯಾಮ ಪೂಜಾರಿ, ಎಸ್ ಬಿ ಕಮತಗಿ, ಸೇರಿದಂತೆ ಕೃಷಿ ಇಲಾಖೆಯ ಚಿಕ್ಕೋಡಿ ಜಿಲ್ಲಾ ಉಪ ಕೃಷಿ ನಿರ್ದೇಶಕ ಎಚ್ ಡಿ ಕೋಳೆಕರ. ತಾಲೂಕಾ ಸಹಾಯಕ ಕೃಷಿ ನಿರ್ದೇಶಕ ನಿಂಗನಗೌಡ ಬಿರಾದಾರ. ಸುಭಾಸ್ ಸೋನಕರ. ಎಸ್ ಎಸ್ ಅವಟಿ ಸೇರಿದಂತೆ ಗ್ರಾಮದ ಹಿರಿಯ ಮುಖಂಡರು ಗ್ರಾಮಸ್ಥರು ಮತ್ತು ಗ್ರಾಮದ ರೈತ ಭಾಂದವರು ಉಪಸ್ಥಿತರಿದ್ದರು.