ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ಕೆಳ ಸೇತುವೆಅಂಡರ್ ಬ್ರಿಜ್. ವಿಸ್ತರಣಾ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಲು ಮನವಿ
ಸಂಜೆವಾಣಿ ವಾರ್ತೆ
ಬಳ್ಳಾರಿ, ಅ.06: ಬಳ್ಳಾರಿ ಹೃದಯ ಭಾಗದ ಗಾಂಧಿನಗರ ಶ್ರೀ ಕನಕ ದುರ್ಗಮ್ಮ ದೇವಸ್ಥಾನದ. ಹತ್ತಿರ ಕೆಳ ಸೇತುವೆ .ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಿ ಪೂರ್ಣಗೊಳಿಸುವಂತೆ ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ವಂಶ ಪರಂಪರೆಯ ಧರ್ಮಕರ್ತರುರಾದ ಪಿ.ಗಾದೆಪ್ಪ ಮನವಿ ಮಾಡಿದ್ದಾರೆ. ಈ ಕುರಿತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಇಂದು ಮನವಿ ಸಲ್ಲಿಸಿದ್ದಾರೆ.
ಈಗಾಗಲೇ ಹಲವಾರು ವರ್ಷಗಳ ಹಿಂದೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಿಸ್ತರಣಾ ಕಾಮಗಾರಿಗೆ ಭೂಮಿ ಪೂಜೆ ಸಹ ನೆರೆವೇರಿಸಲಾಗಿದ್ದು. ಈ ಕಾಮಗಾರಿ. ತಮ್ಮ ಇಲಾಖೆ ವತಿಯಿಂದ ವಿಳಂಬವಾಗುತ್ತಿರುವ ಬಗ್ಗೆ  ಭಕ್ತಾದಿಗಳಿಗೂ ಮತ್ತು ಸಾರ್ವಜನಿಕರಿಗೂ ತುಂಬಾ ತೊಂದರೆ ಉಂಟಾಗುತ್ತಿದ್ದು. ಇದನ್ನು ಈ ಕಾಮಗಾರಿಗೆ ತಗಲುವ ವೆಚ್ಚವನ್ನು ಬಳ್ಳಾರಿ ನಗರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ . ಸುಮಾರು 9,00,00,000 ಕೋಟಿ ಹಣವನ್ನು ಈಗಾಗಲೇ ರೈಲ್ವೆ ಇಲಾಖೆಗೆ ಸಂದಾಯವಾಗಿರುತ್ತದೆ.
ದಯಾಳುಗಳದ ತಾವುಗಳು ಈ ಒಂದು ವಿಷಯದ ಬಗ್ಗೆ ಮುತುವರ್ಜಿ ವಹಿಸಿ ತಕ್ಷಣ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ಕೊಟ್ಟು ನಮ್ಮ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ವಿನಂತಿಸಿಕೊಂಡಿದ್ದಾರೆ.
ಪಿ ಗಾದೆಪ್ಪ.