ಜೆಡಿಎಸ್ ಪಕ್ಷವನ್ನು ಸಂಘಟನಾತ್ಮಕವಾಗಿ ಬೇರು ಮಟ್ಟದಿಂದ ಬಲಪಡಿಸಿ : ಮಾಜಿ ಶಾಸಕ ಡೊಂಗರಗಾಂವ
ಅಥಣಿ/ಚಿಕ್ಕೋಡಿ : ಸೆ.6:ಪಕ್ಷದ ಸಂಘಟನೆಯ ಶಕ್ತಿ ಹೆಚ್ಚು ಮಾಡಲು ಆಂತರಿಕವಾಗಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟನಾತ್ಮಕವಾಗಿ ಬಲಪಡಿಸಲು ಸದಸ್ಯತ್ವ ನೋಂದಣಿ ಅಭಿಯಾನ ನಡೆಸಿ ಪಕ್ಷವನ್ನು ಬಲವರ್ಧನೆಗೊಳಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಶಹಾಜಹಾನ ಡೊಂಗರಗಾಂವ ಹೇಳಿದರು.
ಅವರು ಬುಧವಾರ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಕೆ ಪಿ ಮಗೆಣ್ಣವರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಬೆಳಗಾವಿ ಮತ್ತು ಚಿಕ್ಕೋಡಿ ಜಿಲ್ಲಾ ಸದಸ್ಯತ್ವ ನೋಂದಣಿ ಅಭಿಯಾನದ ಉಸ್ತುವಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟದವರೆಗೆ ಸಂಘಟಿಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಕಟ್ಟಕಡೆಯ ಕಾರ್ಯಕರ್ತರನ್ನು ಗುರುತಿಸಿ ಎಲ್ಲರೂ ಸೇರಿ ಪಕ್ಷ ಸಂಘಟನೆ ಮಾಡಬೇಕು ಎಂದರು.
ಪಕ್ಷ ಸಂಘಟನೆಯಲ್ಲಿ ಒಬ್ಬ ಕ್ರಿಯಾಶೀಲ ಸದಸ್ಯನಾಗಲು 25 ಜನ ಸದಸ್ಯರ ನೊಂದಣಿ ಮಾಡಬೇಕು ಅಂತವರಿಗೆ ಮಾತ್ರ ಪಕ್ಷದ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಸಂಘಟಿಸಲು ಪಕ್ಷದ ಪದಾಧಿಕಾರಿಯಾಗಲು ನಾಮನಿರ್ದೇಶನ ಮಾಡಲು ಅವಕಾಶ ಇರುತ್ತದೆ ಸಾರ್ವಜನಿಕ ಸೇವೆಯಲ್ಲಿರುವ ನಾವೆಲ್ಲರೂ ಮುಖಂಡತ್ವವನ್ನು ಬೆಳೆಸಿಕೊಳ್ಳಲು ಜನಬೆಂಬಲದೊಂದಿಗೆ ಪಕ್ಷದ ಬಲವರ್ಧನೆ ಹೆಚ್ಚಿಸಲು ಪ್ರಾಮಾಣಿಕವಾಗಿ ಶ್ರಮ ಪಡಬೇಕಾಗಿದೆ ಎಂದರು
ಈ ವೇಳೆ ಇನ್ನೋರ್ವ ಉಸ್ತುವಾರಿಗಳಾದ ಮಾಜಿ ಸಚಿವ ಆನಂದ ಆಸ್ನೋಟಿಕರ್ ಮಾತನಾಡಿ ಪಕ್ಷ ಬೇರುಮಟ್ಟದಿಂದ ಗಟ್ಟಿಯಾದರೆ ಮಾತ್ರ ಪ್ರಮುಖ ಎರಡು ರಾಜಕೀಯ ಪಕ್ಷಗಳನ್ನು ಎದುರಿಸಲು ಸಾಧ್ಯವಾಗುತ್ತದೆ. ಪಕ್ಷದ ಸಂಘಟನೆ ಹಾಗೂ ಶಕ್ತಿ ಹೆಚ್ಚಿಸಿಕೊಳ್ಳಲು ಆಂತರಿಕವಾಗಿ ಸದಸ್ಯತ್ವ ಅಭಿಯಾನ ಚುರುಕುಗೊಳಿಸಬೇಕು. ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸಬೇಕು’ ಎಂದರು
ಬೂತ್ ಮಟ್ಟದಿಂದ ಪಕ್ಷ ಸಂಘಟನೆ :-
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಿರಿಯ ಮುತ್ಸದ್ದಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಸೂಚನೆಯಂತೆ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ನೇತೃತ್ವದಲ್ಲಿ ಮೂರು ಬಾರಿ ಸಭೆಯನ್ನು ಆಯೋಜಿಸಿ ಜೆಡಿಎಸ್ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನೆ ಮಾಡಿ ಸದಸ್ಯತ್ವ ನೊಂದಣಿ ಅಭಿಯಾನ ಹಾಗೂ ಬೂತ್ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟದ ವರೆಗೆ ವಿವಿಧ ಸಮಿತಿಗಳನ್ನು ರಚಿಸಲು ಸಭೆಯಲ್ಲಿ ನಿರ್ಧರಿಸಲಾಗಿತ್ತು ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನ ನೇಮಿಸಲು ರಾಜ್ಯ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿತ್ತು
ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಯ ಉಸ್ತುವಾರಿಗಳಾಗಿ ಮಾಜಿ ಸಚಿವ ಆನಂದ ಆಸ್ನೋಟಿಕರ್. ಮಾಜಿ ಶಾಸಕರುಗಳಾದ ಶಹಾಜಹಾನ ಡೊಂಗರಗಾಂವ. ಎಚ್ ಎಸ್ ಶಿವಶಂಕರ್. ವೀರಭದ್ರಪ್ಪ ಹಾಲರವಿ ಹಾಗೂ ಜೆಡಿಎಸ್ ಪಕ್ಷದ ಬಾಗಲಕೋಟೆ ಜಿಲ್ಲಾಧ್ಯಕ್ಷ ಮಾವಿನಮರದ ಅವರನ್ನು ನೇಮಿಸಲಾಗಿತ್ತು
ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರು ಮಾಜಿ ಶಾಸಕ ಡೊಂಗರಗಾಂವ :
ಪಕ್ಷದ ಮುಖಂಡರು ಪಕ್ಷ ಸಂಘಟನೆಯ ರೂಪರೇಷೆಗಳನ್ನು ರೂಪಿಸುವ ಸಂದರ್ಭದಲ್ಲಿ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ನಾವೆಲ್ಲರೂ ಒಂದೇ ಕುಟುಂಬದ ಸದಸ್ಯರಂತೆ ಒಂದಾಗಿ ಕಾರ್ಯ ನಿರ್ವಹಿಸಬೇಕು. ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಎಲ್ಲ ಸಮುದಾಯಗಳ ಜನರನ್ನು ಒಳಗೊಂಡು ನೋಂದಣಿ ಮಾಡುವ ಪ್ರಕ್ರಿಯೆ ನಡೆಸಬೇಕು’ ಯಾವುದೇ ರೀತಿಯ ತೊಂದರೆ ತೊಡಕುಗಳು ಉಂಟಾದಲ್ಲಿ ಹೆಚ್ಚಿನ ಮಾಹಿತಿ ಅವಶ್ಯಕತೆ ಕಂಡು ಬಂದಲ್ಲಿ ಆ ಕಾರ್ಯಕರ್ತರಿಗೆ ಜಿಲ್ಲಾ ಉಸ್ತುವಾರಿ ಸದಸ್ಯರು ಸಹಾಯ ಸಹಕಾರ ಮತ್ತು ಮಾರ್ಗದರ್ಶನ ನೀಡಲಿದ್ದಾರೆ
ಈ ವೇಳೆ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಕೆ ಪಿ ಮಗೆಣ್ಣವರ. ಮಲ್ಲಿಕಾರ್ಜುನ ಗುಂಜಿಗಾಂವಿ.
ಇಮ್ತಿಯಾಜ್ ಹಿಪ್ಪರಗಿ. ರಾಜು ಡವರಿ. ಸೇರಿದಂತೆ ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳ ಅಧ್ಯಕ್ಷರು. ತಾಲೂಕಾ ಅಧ್ಯಕ್ಷ ಸೇರಿದಂತೆ ಹಲವರು ಉಪಸ್ಥಿತರಿದ್ದರು