ಹದಗೆಟ್ಟ ಬಬಲೇಶ್ವರ ರಸ್ತೆ ಗ್ರಾಮಸ್ಥರ ಆಕ್ರೋಶ
ಆಳಂದ :ಸೆ.6:ತಾಲೂಕಿನ ಖಜೂರಿ ಮುಖ್ಯರಸ್ತೆಯಿಂದ ಬಬಲೇಶ್ವರ ಗ್ರಾಮದವರೆಗೆ ರಸ್ತೆ ಸಂಪೂರ್ಣವಾಗಿ ಕೆಟ್ಟು ಹೋಗಿದೆ . ವಿದ್ಯಾರ್ಥಿಗಳು ಹಿರಿಯ ನಾಗರಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ರೋಡ್ ಹದಗೆಟ್ಟಿರುವದರಿಂದ ಬಸ್ ಸಂಚಾರ ಸ್ಥಗಿತಗೊಳಿಸುತ್ತೇವೆ ಎಂದು ಕೆ.ಎಸ್.ಆರ್. ಟಿ ಸಿ ಅಧಿಕಾರಿಗಳು ತಿಳಿಸಿದ್ದಾರೆ ಒಂದು ವೇಳೆ ಬಸ್ ಸಂಚಾರ ಸ್ಥಗಿತಗೊಂಡರೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳಿಗೆ ಹೋಗಲು ತುಂಬಾ ಕಷ್ಟವಾಗುತ್ತದೆ. ರಸ್ತೆ ಕೆಟ್ಟು ಹೋಗಿರುವ ಕುರಿತು ಲೋಕೋಪ ಯೋಗಿ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು ಯಾವುದೇ ಪ್ರತಿಕ್ರಿಯೆ ಬಂದಿಲ್ಲ
ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಶಾಸಕರು ಕೂಡಲೇ ನಮ್ಮ ಊರಿನ ರಸ್ತೆ ದುರಸ್ಥಿ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಖಜೂರಿ ಮುಖ್ಯ ರಸ್ತೆ ಬಂದ್ ಮಾಡಿ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಯುವ ಮುಖಂಡ ಮಹಾದೇವ ಎಸ್.ಕಾಂಬಳೆ ಆಕ್ರೋಶ ವ್ಯಕ್ತಪಡಿಸಿದರು.