ಖರ್ಗೆ ವಿರುದ್ಧ ಅವಹೇಳನಕರ ಹೇಳಿಕೆ ಖಂಡನೀಯ
ಕಲಬುರಗಿ:ಸೆ.6: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಇಲ್ಲಸಲ್ಲದ ಆರೋಪವನ್ನು ಮಾಡುತ್ತಿರುವ ಬಿಜೆಪಿ ಪಕ್ಷದ ವಿಧಾನ ಪರಿಷತ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ಅವರು ಬಿಜೆಪಿ ಪಕ್ಷದ ಒಬ್ಬ ಬಕಿಟ್ ನಾಯಕ ಆಗಿದ್ದಾರೆ. ಆರ್ ಎಸ್ ಎಸ್ ನ ಅಂಡರ್ವೇರ್ ಗಳನ್ನು ತಲೆ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿದಂತ ವ್ಯಕ್ತಿ, ನಮ್ಮ ದಲಿತರು ನಾಚಿಕೆ ಪಡುವಂತೆ ಕೆಲಸ ಮಾಡಿದ್ದು ಖಂಡನೀಯ ಎಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಮಾಧ್ಯಮ ವಕ್ತಾರರಾದ ಅಮೃತ ಸಜ್ಜನ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಇಲ್ಲವಾದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ದಲಿತ ವಿರೋಧಿ, ಒಬಿಸಿ ವಿರೋಧಿ ಮತ್ತು ಅಲ್ಪಸಂಖ್ಯಾತ ವಿರೋಧಿ ಸರ್ಕಾರವಾಗಿದೆ ಎಂದು ಹೇಳಬೇಕಾಗುತ್ತದೆ ಎಂದರು. ನಮ್ಮ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯ ಅವರಿಗೆ ಕೆಪಿಸಿಸಿ ಪರಿಶಿಷ್ಠ ಜಾತಿ ವಿಭಾಗದ ವತಿಯಿಂದ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.