ಕಾಖಂಡಕಿಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ವಿಜಯಪುರ, ಸೆ.6 :ಬಬಲೇಶ್ವರ ತಾಲ್ಲೂಕಿನ ಕಾಖಂಡಕಿ ಕ್ಲಸ್ಟರ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೆಯಿತು.
ಈ ಪ್ರತಿಭಾ ಕಾರಂಜಿಯಲ್ಲಿ ಕಾಖಂಡಕಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಭರತನಾಟ್ಯ, ಭಾವಗೀತೆ, ಕವ್ವಾಲಿ, ಧಾರ್ಮಿಕ ಪಠಣ,,ಪದ್ಯ ವಾಚನ, ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಹಾಗೂ ಭಾಷಣ (ಕನ್ನಡ,ಇಂಗ್ಲೀಷ) ,,ಚಿತ್ರ ಕಲೆ, ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ,ರಂಗೋಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಮಕ್ಕಳ ಈ ಸಾಧನೆಗೆ ಶಾಲೆಯ ಮುಖ್ಯ ಗುರುಗಳಾದ ಎಸ್.ಬಿ.ಪಾಟೀಲ ಹಾಗೂ ಎಲ್ಲ ಸಹ ಶಿಕ್ಷಕ- ಶಿಕ್ಷಕಿಯರು, ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ರಾಮು ಜಾಧವ ಅವರು ಅಭಿನಂದನೆ ಸಲ್ಲಿಸಿದ್ದಾರೆ.