ಕಬಡ್ಡಿಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ
ಕೊಲ್ಹಾರ: ಸೆ.6:ತಾಲೂಕಿನ ತಳೇವಾಢ ಪಿ.ಎಂ.ಶ್ರೀ ಕೆ.ಬಿ.ಎಮ್.ಪಿ.ಎಸ್. ಶಾಲೆಯ ಮಕ್ಕಳು ಬುಧವಾರ ಹಣಮಾಪೂರದಲ್ಲಿ ಜರುಗಿದ ಕೊಲ್ಲಾರ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ಥ್ರೋಬಾಲ್ ನಲ್ಲಿ ದ್ವಿತೀಯ ,ಉದ್ದ ಜಿಗಿತದಲ್ಲಿ ಶ್ರವಣಕುಮಾರ ಬ್ಯಾಲ್ಯಾಳ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಗುಂಡು ಎಸೆತ ಹಾಗೂ ಚಕ್ರ ಎಸೆತದಲ್ಲಿ ಭೀಮನಗೌಡ ಜಕ್ಕನ್ನವರ ತೃತೀಯ ಸ್ಥಾನ ಪಡೆದುಕೊಂದ್ದಾನೆ.ಅದೇ ರೀತಿ ಗ್ರಾಮದ ವಿಶ್ವಭಾರತಿ ಶಾಲೆಯ ಬಾಲಕಿಯರು ಕಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಕೆ.ಜಿ.ಎಚ್.ಪಿ.ಎಸ್.ಶಾಲೆಯ ವಿದ್ಯಾರ್ಥಿನಿಯರು ಥ್ರೋಬಾಲ್ ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ .ಕೆ.ಜಿ.ಎಸ್.ಶಾಲೆಯ ವಿದ್ಯಾರ್ಥಿನಿ ಕುಮಾರಿ ಜ್ಯೊತಿ ಚೌವ್ಹಾಣ್ ಗುಂಡು ಎಸೆತದಲ್ಲಿ ಪ್ರಥಮ ಹಾಗೂ ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ.ತಾಲೂಕ ಮಟ್ಟಕ್ಕೆ ಆಯ್ಕೆಯಾದ ಎಲ್ಲ ವಿದ್ಯಾರ್ಥಿಗಳಿಗೆ ತಳೇವಾಡ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವಸದಸ್ಯರು ಹಾಗೂ ಶಾಲೆಯ ಮುಖ್ಯಗುರುಗಳು ಮತ್ತು ಶಿಕ್ಷಕರು ವಿದ್ಯಾರ್ಥಿಗಳ ಪೆÇೀಷಕರು ಹಾಗೂ ಗ್ರಾಮದ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.