ವಿಭಾಗ ಮಟ್ಟಕ್ಕೆ ಆಯ್ಕೆ
ಕಲಬುರಗಿ:ಸೆ.6:ಸಾರ್ವಜನಿಕ ಶಿಕ್ಷಣ ಇಲಾಖೆಯವತಿಯಿಂದ04 ಸೆಪ್ಟೆಂಬರ2024ರಂದು ಆಯೋಜಿಸಿದ ಜಿಲ್ಲಾ ಮಟ್ಟದ ಬಾಸ್ಕೇಟಬಾಲ ಕ್ರೀಡಾಕೂಟದಲ್ಲಿ ನಗರದಎಸ್. ಆರ್. ಎನ್. ಮೆಹತಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಆಯ್ಕೆ ಪ್ರಕ್ರಿಯೆಯಲ್ಲಿ14 ವರ್ಷದ ಒಳಗಿನ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನವನ್ನು, 17 ವರ್ಷದ ಒಳಗಿನ ಬಾಲಕರು ಮತ್ತು ಬಾಲಕಿಯರು ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ವಿಭಾಗ ಮಟ್ಟಕ್ಕೆಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಟ್ರಸ್ಟಿಗಳಾದ ಶ್ರೀ ಚಕೋರ ಮೆಹತಾ, ಪ್ರಾಚಾರ್ಯರಾದ ಶ್ರೀಮತಿ ಪ್ರೀತಿ ಮೆಹತಾ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಶ್ರೀ ಬಸವರಾಜ ತಳಕೇರಿ, ಬಾಸ್ಕೇಟಬಾಲ ತರಬೇತುದಾರರಾದಅಂಬರೀಷದೊಡ್ಡಮನಿ ಹಾಗೂ ಶಿಕ್ಷಕ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.