ಶಶಿಕಲಾ ಇವರಿಗೆ ಮುಖ್ಯಮಂತ್ರಿಗಳಿಂದ ಸನ್ಮಾನ
ಇಂಡಿ:ಸೆ.6:ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಇಂಡಿ ತಾಲೂಕಿನ ನಾದ ಕೆಡಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಶಶಿಕಲಾ ಲಕ್ಷ್ಮಣ ಬಡಿಗೇರ ಇವರನ್ನು ಮುಖ್ಯಮಂತ್ರಿಗಳು ಸನ್ಮಾನಿಸಿದರು.
ಬೆಂಗಳೂರಿನ ವಿಧಾನಸೌಧದ ಬೆಂಕ್ವೆಟ್ ಹಾಲ್ ದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಶಿಕಲಾ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಸಮಾರಂಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರೆಪ್ಪ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ, ಸಚಿವ ಕೆ.ಜಿ.ಜಾರ್ಜ, ಪ್ರಧಾನ ಕಾರ್ಯದರ್ಶಿ ರಿತೇಶ ಕುಮಾರ ಸಿಂಗ, ಆಯುಕ್ತ ಬಿ.ಬಿ.ಕಾವೇರಿ ಮತ್ತಿತರಿದ್ದರು.