ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯಿಂದ ದಕ್ಷ ಶಿಕ್ಷಕ ಪ್ರಶಸ್ತಿ ಪ್ರಧಾನ
ಅಥಣಿ : ಸೆ.6:ಸರಕಾರಿ ಶಾಲೆಯ ಶಿಕ್ಷಕರಿಗೆ ಒಂದು ಖಾಸಗಿ ಶಾಲೆಯು ಪ್ರತಿ ವರ್ಷ ಪ್ರಶಸ್ತಿ ನೀಡಿ ಸನ್ಮಾನ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ನಿವೃತ್ತ ಪ್ರಾಚಾರ್ಯ ಎಸ್.ಎಸ್.ಗೌಡರ ತಿಳಿಸಿದರು.
ಅವರು ಗುರುವಾರ ಇಲ್ಲಿನ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಶ್ರೀಮತಿ ಕಾಶಿಬಾಯಿ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ 2024-25 ನೇ ಸಾಲಿನ ದಕ್ಷ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಸರಕಾರಿ ಶಾಲೆಗಳು ಉಳಿಯಬೇಕು ಬೆಳೆಯಬೇಕು ಅನ್ನುವ ಒಂದು ಸದುದ್ಧೇಶ ಹೊಂದಿರುವ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯು ಸರಕಾರಿ ಶಾಲೆಯ ಶಿಕ್ಷಕರಿಗೆ ಪ್ರೇರಣೆ ನೀಡುವ ಹಿನ್ನಲೆ ಪ್ರತಿ ವರ್ಷ ಈ ಪ್ರಶಸ್ತಿಯನ್ನು ನೀಡುತ್ತಿರುವುದು ನಮ್ಮೆಲ್ಲರಿಗೂ ಹಮ್ಮೆಯ ವಿಷಯ ಎಂದು ಹೇಳಿದರು.
ಸಮಾರಂಭವನ್ನು ಉದ್ಘಾಟಿಸಿದ ಅಥಣಿ ತಾಲೂಕಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಎಸ್.ಪಾಟೀಲ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಬಹಳಷ್ಟು ಪ್ರತಿಬಾಂತ, ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಕರಿದ್ದಾರೆ. ಆದರೆ ಸರ್ಕಾರದ ಶೈಕ್ಷಣಿಕ ಯೋಜನೆಗಳು ಸರಿಯಾಗಿ ಅನುಷ್ಠಾನ ಮಾಡಬೇಕು. ಶಿಕ್ಷಕರಿಗೆ ನೀಡುವ ಇತರೆ ಕೆಲಗಳ ಒತ್ತಡವೇ ಸರಕಾರಿ ಶಾಲೆಯಗಳಲ್ಲಿ ಶೈಕ್ಷಣಿಕ ಗುಣಮಟ್ಟದ ಕೊರತೆಗೆ ಕಾರಣವಾಗುತ್ತದೆ. ಖಾಸಗಿ ಶಾಲೆಯ ಆಡಳಿತ ಮಂಡಳಿಯವರು ಸರ್ಕಾರಿ ಶಾಲೆಯ ಶಿಕ್ಷಕರನ್ನು ಗೌರವಿಸುತ್ತಿರುವುದು ನಮ್ಮೆಲ್ಲರಿಗೆ ಸಂತಸ ಮತ್ತು ಹೆಮ್ಮೆಯ ವಿಚಾರವಾಗಿದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುರೇಶ್ ಚಿಕ್ಕಟ್ಟಿ ಮಾತನಾಡಿದರು.
2024-25 ನೇ ಸಾಲಿನ ದಕ್ಷ ಶಿಕ್ಷಕ ಪ್ರಶಸ್ತಿಗೆ ಅಥಣಿ ವಲಯದಿಂದ ಸರಕಾರಿ ಪ್ರೌಢಶಾಲೆ ಹಲ್ಯಾಳದ ಸಹ ಶಿಕ್ಷಕ ಅನಿಲಕುಮಾರ ಮಾರುತಿ ಕುಂಬಾರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಗನೂರ ಪಿ.ಎ.ದ ಸಹ ಶಿಕ್ಷಕ ತೇಜಸ್ವಿ. ಜಿ ಮತ್ತು ಕಾಗವಾಡ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ವಿಜಯಕುಮಾರ ರಾವಸಾಬ ಪಾಟೀಲ ಆಯ್ಕೆಯಾಗಿದ್ದು ಅವರನ್ನು ಪ್ರಶಸ್ತಿ ನೀಡುವುವದರ ಮೂಲಕ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ರಾಮಣ್ಣ ದರಿಗೌಡ, ಸುರೇಶ ವಾಡೇದ, ಎಮ್.ಜಿ.ಸಂಕಪಾಳ, ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸದಾಶಿವ ಚಿಕ್ಕಟ್ಟಿ, ಕಿರಣ ಬುರ್ಲಿ, ಬಾಡಗಿ ಆರ್.ಎಸ್.ಕೆಂಚಣ್ಣವರ, ಸಂತೋಷ ಅಸ್ಕಿ ಉಪಸ್ಥಿತರಿದ್ದರು. ಶ್ರೀಮತಿ ಕಾಶಿಬಾಯಿ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಮುಖೋಪಾಧ್ಯಯ ವಿಶ್ವನಾಥ ಸೌದಾಗರ ನಿರೂಪಸಿದರು, ತಿಮ್ಮಪ್ಪಾ ಮೂಗೇರ ವಂದಿಸಿದರು.