ಕುಡಿಯುವ ನೀರು ಕಲುಷಿತವಾಗದಂತೆ ಎಚ್ಚರ ವಹಿಸಿ
ಕೋಲಾರ, ಸೆ,೬-ಜಿಲ್ಲಾದ್ಯಂತ ಮುಂಗಾರು ಮಳೆ ಸಾಧಾರಣ ವಾಗಿದೆ. ಹವಾಮಾನ ಇಲಾಖೆ ಸೂಚನೆಯಂತೆ ಪ್ರಸಕ್ತ ವಷ ಮಳೆ ಕೊರತೆ ಉಂಟಾಗಬಹುದಾಗಿದೆ. ಆದಾಗ್ಯು ಸಮರ್ಪಕ ನಿರ್ವಹಣೆ ಕೈಗೊಳ್ಳಬೇಕು. ಕುಡಿಯುವ ನೀರು ಕಲುಷಿತಗೊಳ್ಳದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಸೂಚಿಸಿದರು.
ಪ್ರಸ್ತುತ ಮುಂಗಾರು ಹಂಗಾಮಿನ ಋತುಮಾನ ಪರಿಸ್ಥಿತಿಯಾನುಸಾರ ಜಿಲ್ಲೆಯಲ್ಲಿ ಓಆಖಈರಂತೆ ಪರಿಹಾರ ವಿತರಣೆ, ಮನೆ ಹಾನಿ ಪ್ರಕರಣಗಳನ್ನು ತಂತ್ರಾಂಶದಲ್ಲಿ ಇಂಡೀಕರಣ, ಬೆಳೆ ನಷ್ಟ ಜಂಟಿ ಸಮೀಕ್ಷೆ ಮತ್ತು ಸಾರ್ವಜನಿಕ ಪ್ರಚಾರ, ಬರ ಪರಿಹಾರ ಓPಅI ವಿಫಲ ಪ್ರಕರಣಗಳ ಪ್ರಗತಿ ಬಗ್ಗೆ ಕ್ರಮವಹಿಸಲು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.ಮಳೆಯಿಂದ ಜಿಲ್ಲೆಯ ಜನ ಜಾನುವಾರು ಜೀವ ಹಾನಿಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ತಹಶೀಲ್ದಾರ ಅವರು ತಮ್ಮ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕಾಲಕಾಲಕ್ಕೆ ಟಾಸ್ಕ್ ಪೋರ್ಸ್ ಸಭೆ ನಡೆಸಿ ತಾಲೂಕಾ ಹಂತದಲ್ಲಿ ಮಳೆ ಸಮರ್ಪಕ ನಿರ್ವಹಣೆ ಕುರಿತಂತೆ ಹಾಗೂ ಅತೀವೃಷ್ಟಿ ನಿರ್ವಹಣೆ ಯೋಜನೆ ಬಗ್ಗೆ ಕಾಲಕಾಲಕ್ಕೆ ಸಭೆ ನಡೆಸಬೇಕು ಎಂದು ಹೇಳಿದರು.
ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿನ ಅಧಿಕಾರಿಗಳು ರಾಜಕಾಲುವೆಗಳ ಹಾಗೂ ಚರಂಡಿಗಳಲ್ಲಿನ ತ್ಯಾಜ್ಯ ನಿರ್ವಹಣೆ ಮಾಡುವ ಮೂಲಕ ಮಳೆ ನೀರು ಸರಾಗವಾಗಿ ಮುಂದೆ ಸಾಗಲು ಅನುವು ಮಾಡಿಕೊಡಬೇಕು.
ನಗರದಲ್ಲಿನ ಖಾಸಗಿ ಖಾಲಿ ಜಾಗಗಳ ಸ್ವಚ್ಛತೆಗೊಳಿಸಲು ಸಂಬಂಧಿಸಿದ ಮಾಲೀಕರಿಗೆ ಸೂಚನೆ ನೀಡಬೇಕು. ತೆರವುಗೊಳಿಸದಿದ್ದಲ್ಲಿ ದಂಡ ವಿಧಿಸುವ ಮೂಲಕ ಕಸ ವಿಲೇವಾರಿಗೆ ಮುಂದಾಗುವಂತೆ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ಮಳೆ ಪ್ರಮಾಣ ಅಧಿಕವಾದಲ್ಲಿ ಸಾಂಕ್ರಾಮಿಕ ರೋಗಗಳು ಎದುರಾಗಬಹುದು. ಅವುಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ದಿನನಿತ್ಯ ಕುಡಿಯಲು ಬಳಸುವ ನೀರನ್ನು ಕುದಿಸಿ, ಆರಿಸಿ ಕುಡಿಯಲು ಉಪಯೋಗಿಸುವಂತೆ ತಿಳಿಹೇಳಬೇಕು. ಸಾರ್ವಜನಿಕರ ದೂರುಗಳಿಗೆ ಆಸ್ಪದ ನೀಡದಂತೆ ಅಧಿಕಾರಿ ವರ್ಗ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವಂತೆ ತಿಳಿಸಿದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಅತೀವೃಷ್ಟಿ ಸಂಭವಿಸಿದಲ್ಲಿ ನಿರ್ವಹಣೆಗೆ ಸಿದ್ಧರಾಗಬೇಕು. ಅತೀವೃಷ್ಟಿ ಎದುರಾದಲ್ಲಿ ತಕ್ಷಣ ಜೀವಹಾನಿ ತಡೆಗೆ ಮುಂದಾಗಬೇಕು. ಜನಸಾಮಾನ್ಯರ ಜೀವ, ಆಸ್ತಿಹಾನಿ ತಡೆಗೆ ಸ್ಥಳೀಯ ಹಂತದಲ್ಲಿ ಮುಂಜಾಗ್ರತೆ ವಹಿಸುವಂತೆ ಸೂಚಿಸಿದರು. ಅಗ್ನಿಶಾಮಕ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಅತೀವೃಷ್ಟಿ ನಿರ್ವಹಣೆಗೆ ಅಗತ್ಯವಿರುವ ರಕ್ಷಣಾ ಸಾಮಗ್ರಿಗಳನ್ನು ಸುವ್ಯವಸ್ಥೆಯಲ್ಲಿಟ್ಟು ಕೊಳ್ಳಬೇಕು.ನುರಿತ ಈಜುಗಾರರನ್ನು ಗುರುತಿಸಿಟ್ಟುಕೊಂಡು ಸಂದರ್ಬಕ್ಕನುಸಾರ ಸಾರ್ವಜನಿಕರ ಸಂರಕ್ಷಣೆಗೆ ಆದ್ಯತೆ ನೀಡಲು ತಿಳಿಸಿದರು. ಜಿಲ್ಲಾ ಕೇಂದ್ರ ಸೇರಿದಂತೆ ತಾಲೂಕು ಮಟ್ಟದಲ್ಲಿ ಅತೀವೃಷ್ಟಿ ನಿರ್ವಹಣೆಗಾಗಿ ಜನಸಾಮಾನ್ಯರಿಗೆ ಸಹಾಯವಾಣಿ ವ್ಯವಸ್ಥೆ ಕಲ್ಪಿಸಲಾಗಿದೆ.
ಸಾರ್ವಜನಿಕರು ಸಂದಿಗ್ದ ಪರಿಸ್ಥಿತಿಯಲ್ಲಿ ಕಂಟ್ರೋಲ್ ರೂಮ್ ಗೆ ಕರೆ ಮಾಡುವ ಮೂಲಕ ಸಹಾಯ ಪಡೆಯುವಂತೆ ತಿಳಿಸಿದರು.
ಪಶುಸಂಗೋಪನ ಇಲಾಖೆ ಅಧಿಕಾರಿಗಳಿಗೆ ಜಾನುವಾರುಗಳಿಗೆ ಮೇವು ಕೊರತೆ ಉಂಟಾಗದಂತೆ ಸಾಕಷ್ಟು ಮೇವು ದಾಸ್ತಾನು ಮಾಡಲು ಸೂಚಿಸಿದರು.