ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಪಾತ್ರ ದೊಡ್ಡದು
ಕೋಲಾರ,ಸೆ೬:ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಜ್ಞಾನ ಸಂಪತ್ತನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅಭಿಪ್ರಾಯಪಟ್ಟರು.
ನಗರದ ಮಹಿಳಾ ಸಮಾಜ ಕಾಲೇಜಿನಲ್ಲಿ ಗುರುವಾರ ನಡೆದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿ ಹಿಂದಿನ ಕಾಲದಲ್ಲಿ ಓದಲಿಕ್ಕೆ ಪೂರಕವಾದ ವಾತಾವರಣ ಇರಲಿಲ್ಲ ಇಂದು ಕಣ್ಣ ಮುಂದೆ ಇರುವಂತ ತಂತ್ರಜ್ಞಾನವನ್ನು ಬಳಿಸಿ ಕೊಂಡು ನೋಡಬಹುದಾದ ಕಾಲಘಟ್ಟದಲ್ಲಿ ನಾವು ಇದ್ದೇವೆ. ಬೇರೆ ಬೇರೆ ದೇಶಗಳಲ್ಲಿ ನಡೆಯುವ ವಿಚಾರಗಳನ್ನು ನೋಡಬಹುದು ಮೊದಲು ಅಲ್ಲಿಗೆ ಹೋಗಬೇಕಾಗಿತ್ತು ಇವತ್ತು ನಾವು ಕುಳಿತಲ್ಲಿಯೇ ನೋಡ ಬಹುದಾದ ಅವಕಾಶವನ್ನು ತಂತ್ರಜ್ಞಾನವು ಕಲ್ಪಿಸಿ ಕೊಟ್ಟಿದೆ. ಕಾಲೇಜುಗಳಲ್ಲಿ ಅಧುನಿಕತೆಗೆ ಪೂರಕವಾದ ಹೊಸ ಹೊಸ ಕೋರ್ಸ್ ಗಳ ಜೊತೆಗೆ ಸೌಲಭ್ಯಗಳನ್ನು ಕೊಡುವ ಕೆಲಸ ನಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ವಿದ್ಯೆ ಕಲಿಸಿದ ಗುರುಗಳಿಗೂ ಗೌರವ ಸಿಗುತ್ತದೆ ಶಿಕ್ಷಣ, ಆರೋಗ್ಯ, ಉದ್ಯೋಗ, ಕೃಷಿಗೆ ಹೆಚ್ಚಿನ ಅದ್ಯತೆ ನೀಡಲಾಗುತ್ತದೆ ಎಂದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಶಿಕ್ಷಕರು ಸಹ ದೇಶದ ಪ್ರಥಮ ಪ್ರಜೆಯಾಗಬಹುದು ಎಂಬುದನ್ನು ಸರ್ವಪಲ್ಲಿ ರಾಧಾಕೃಷ್ಣನ್ ತೋರಿಸಿದ್ದಾರೆ ಅವರ ನಡುವಳಿಕೆ ವ್ಯಕ್ತಿತ್ವ ಮತ್ತು ಸಾಧನೆ ನಮಗೆ ಸ್ಪೂರ್ತಿಯಾಗಬೇಕು ಸಾಧನೆ ಮಾಡಿದ ಮಹನೀಯರ ದಾರಿಯಲ್ಲಿ ನಡೆದಾಗ ನಮಗೂ ಸಾಧನೆ ಮಾಡುವ ಸ್ಫೊರ್ತಿ ಬರಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮಹಿಳಾ ಸಮಾಜ ಆಡಳಿತಾಧಿಕಾರಿ ಎಂ.ನವೀನಾ, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಸದಸ್ಯರಾದ ರಾಕೇಶ್, ಅಂಬರೀಷ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಸದಸ್ಯರಾದ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಜೈದೀಪ್, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ಗಂಗಣ್ಣ, ಕುರಿಗಳ ರಮೇಶ್, ಅಬ್ದುಲ್ ಖಯ್ಯೂಂ, ಮಹಿಳಾ ಸಮಾಜ ಕಾಲೇಜಿನ ಕಾರ್ಯದರ್ಶಿ ಎಂ.ನಂದನಾ, ಉಪಾಧ್ಯಕ್ಷೆ ಲಕ್ಷ್ಮೀ ಚಂದ್ರಪ್ಪ, ಖಜಾಂಚಿ ಪದ್ಮ, ಸಂಸ್ಥೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀನಿವಾಸ್ ಮುಂತಾದವರು ಇದ್ದರು,