ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕ ಸ್ಪಂದನೆ-ಬಿಇಒ
ಕೋಲಾರ.ಸೆ.೬: ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕ ಸ್ಪಂದನೆ ನೀಡುವುದಾಗಿ ತಾಲ್ಲೂಕು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಉಮ ತಿಳಿಸಿದರು
ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘ ಕಾರ್ಯಾಲಯದಲ್ಲಿ ತಮಗೆ ನೀಡಿದ ಆತ್ಮೀಯ ಸ್ವಾಗತ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು .
ಶಿಕ್ಷಕರು ತಾಲೂಕಿನಲ್ಲಿ ತಮ್ಮ ಕಾರ್ಯವನ್ನು ಪ್ರಾಮಾಣಿಕಯಿಂದ ಮಾಡುತ್ತಿದ್ದು, ಉತ್ತಮ ಫಲಿತಾಂಶವನ್ನು ನೀಡುತ್ತಿದ್ದು ಈ ರೀತಿನಲ್ಲಿ ವಿದ್ಯಾರ್ಥಿಗಳನ್ನು ಸತ್ಪ್ರಜೆಗಳನ್ನಾಗಿ ತಯಾರು ಮಾಡುತ್ತಿರುವುದು ಸ್ವಾಗತಾರ್ಹ ಸಂಗತಿ ಎಂದರು.
ಇಲಾಖಾ ಕಾರ್ಯವನ್ನು ಮಾಡುವುದರ ಜೊತೆಗೆ ಆದೇಶಗಳನ್ನು ಆಗಿಂದಾಗ್ಗೆ ಪಾಲಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಪ್ರಗತಿಗೆ ಸ್ಪಂದಿಸಬೇಕೆಂದು ಮನವಿ ಮಾಡಿದರು .
ಜಿಲ್ಲಾ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್ ನೇತೃತ್ವದ ನಿಯೋಗದಲ್ಲಿ ಪ್ರಧಾನ ಕಾರ್ಯದರ್ಶಿ ಬಿ.ಎಂ.ನಾರಾಯಣಸ್ವಾಮಿ, ಕೋಶಾಧ್ಯಕ್ಷ ಕೆ.ವಿ ಜಗನ್ನಾಥ್, ಕೋಲಾರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್. ನಾರಾಯಣಸ್ವಾಮಿ, ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಸಿ.ವಿ.ನಾಗರಾಜ್, ನಾಗರಾಜ್, ಜಿಲ್ಲಾ ಎಸ್ಸಿ/ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷ ರಾಮಾಂಜನೇಯ ಮತ್ತಿತರರು ಉಪಸ್ಥಿತರಿದ್ದರು.