ಗಣೇಶೋತ್ಸವ: ಸಭೆ
ಹುಬ್ಬಳ್ಳಿ, ಸೆ6: ಹುಬ್ಬಳ್ಳಿಯಲ್ಲಿ 11 ದಿನಗಳ ಕಾಲ ನಡೆಯುವ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ, ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರ ಸಭೆ ನಡೆಸಿದರು.
ಸಭೆಯಲ್ಲಿ ಬಾವಿಗಳ ಸ್ವಚ್ಛತೆ, ಮಂಟಪಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ, ಭದ್ರತೆ, ವಿದ್ಯುತ್, ನೀರಿನ ವ್ಯವಸ್ಥೆ ಸೇರಿದಂತೆ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮಕೈಗೊಳ್ಳಲು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಾಪೌರರಾದ ರಾಮಣ್ಣ ಬಡಿಗೇರ, ಉಪ ಮಹಾಪೌರರಾದ ಶ್ರೀಮತಿ ದುರ್ಗಮ್ಮ ಶಶಿಕಾಂತ ಬಿಜವಾಡ, ಪಾಲಿಕೆ ಸಭಾ ನಾಯಕರಾದ ವೀರಣ್ಣ ಸವಡಿ, ಪಾಲಿಕೆ ಸದಸ್ಯರಾದ ತಿಪ್ಪಣ್ಣ ಮಜ್ಜಗಿ, ಪಾಲಿಕೆ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ, ಸಹಾಯಕ ಪೊಲೀಸ್ ಆಯುಕ್ತರಾದ ಚಿಕ್ಕಮಠ ಹಾಗೂ ಇತರರು ಉಪಸ್ಥಿತರಿದ್ದರು.