ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಕೊರಟಗೆರೆ, ಸೆ. ೬- ತಾಲ್ಲೂಕಿನ ಕಸಬಾ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟದಲ್ಲಿ ಪಟ್ಟಣದ ತೆರೆಸಾ ಸ್ಕೂಲ್ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ಧಾರೆ.
ಪಟ್ಟಣದ ಕ್ರೀಡಾಂಗಣದಲ್ಲಿ ನಡೆದ ಕೊರಟಗೆರೆ ಕಸಬಾ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟದಲ್ಲಿ ಪಟ್ಟಣದ ತೆರೆಸಾ ಶಾಲೆಯ ವಿದ್ಯಾರ್ಥಿಗಳು ಅಥ್ಲೆಟಿಕ್ಸ್ ಸ್ಪರ್ಧೆಗಳಾದ ೨೦೦ ಮೀಟರ್ ಓಟ, ಚಕ್ರ ಎಸೆತ, ಉದ್ದಜಿಗಿತ ಹಾಗೂ ಪಂದ್ಯಾಟಗಳಾದ ಬಾಲ್‌ಬ್ಯಾಡ್ಮಿಂಟನ್, ಶಟಲ್ ಬ್ಯಾಡ್ಮಿಂಟನ್ ಸೇರಿದಂತೆ ಇನ್ನಿತರ ಸ್ಪರ್ಧೆಗಳಲ್ಲಿ ವಿಜೇತರಾಗಿದ್ದು ತಾಲ್ಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಲಿಯ ಕಾರ್ಯದರ್ಶಿ ಮುಜಾಹಿದ್ ನವಾಜ್, ಪ್ರಾಂಶುಪಾಲ ಅಸ್ಮಾ.ಬಿ. ಶಿಕ್ಷಕಿ ಮಾಲಾ, ದೈಹಿಕ ಶಿಕ್ಷಕ ಮಧುಸೂದನ್, ತಂಡದ ಸಣ್ಣಪ್ಪ ಸೇರಿದಂತೆ ಶಾಲಾ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.
ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡುವಂತೆ ಮಾರ್ಗದರ್ಶನ ನೀಡಿದ್ದಾರೆ.