ರೂ.35 ಕೆಜಿ ದರದಲ್ಲಿ ಈರುಳ್ಳಿ ಚಿಲ್ಲರೆ ಮಾರಾಟಕ್ಕೆ ಕೇಂದ್ರ ಕ್ರಮ
ನವದೆಹಲಿ/ಹುಬ್ಬಳ್ಳಿಸೆ.6: ದೇಶದ ಮಾರುಕಟ್ಟೆಯಲ್ಲಿ ಕಣ್ಣೀರು ತರಿಸುವಂತಿರುವ ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ತರ ಹೆಜ್ಜೆ ಇಟ್ಟಿದ್ದು, ಗ್ರಾಹಕರ ಕೈಗೆಟುಕುವಂತೆ ಕೇವಲ 35 ರೂ. ಕೆಜಿ ದರದಲ್ಲಿ ವಿತರಣೆ ಆರಂಭಿಸಿದೆ.
ನವದೆಹಲಿಯಲ್ಲಿ ು ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಅವರು 35 ರೂ. ಕೆಜಿ ಬೆಲೆಯಲ್ಲಿ ಮಾರಾಟ ಮಾಡುವ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿದ್ದಾರೆ.
ಈ ವೇಳೆ ಮಾತನಾಡಿದ ಸಚಿವ ಪ್ರಲ್ಹಾದ ಜೋಶಿ, ದೇಶದಲ್ಲಿ ಆಹಾರ ಹಣದುಬ್ಬರವನ್ನು ನಿಯಂತ್ರಣದಲ್ಲಿಡಲು ಕೇಂದ್ರ ಸರ್ಕಾರ ಪ್ರಥಮ ಆದ್ಯತೆ ನೀಡುತ್ತದೆ. ಅಂತೆಯೇ ಈಗ ತೀವ್ರ ಏರಿಕೆ ಕಂಡ ಈರುಳ್ಳಿ ದರ ಇಳಿಕೆಗೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ದೇಶಾದ್ಯಂತ 35 ರೂ. ದರದಲ್ಲಿ ವಿತರಣೆಗೆ ಕ್ರಮ: ತೀವ್ರ ಬೆಲೆ ಏರಿಕೆಯಲ್ಲಿರುವ ಇರುಳಿಯನ್ನು ದೇಶಾದ್ಯಂತ 35 ರೂ. ದರದಲ್ಲಿ ಚಿಲ್ಲರೆ ಮಾರಾಟಕ್ಕೆ ಅಗತ್ಯ ಕ್ರಮ ಕೈಗೊಂಡಿದ್ದು, ಈರುಳ್ಳಿ ಮಾರಾಟದ ಸಂಚಾರಿ ವಾಹನಗಳಿಗೆ ಚಾಲನೆ ನೀಡಿದ್ದಾಗಿ ತಿಳಿಸಿದರು.