ಹೂಡಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
ಕೆ.ಆರ್.ಪುರ,ಸೆ.೬– ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜೀವನ ಚರಿತ್ರೆ, ಹೋರಾಟ, ಅವರ ಸಾಧನೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವಂತಾಗಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್ ಅವರು ಹೇಳಿದರು.
ಹೂಡಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಅವರು ರಾಷ್ಟ್ರಪತಿಯಾಗಿ, ಶಿಕ್ಷಕರಾಗಿ ಮಾಡಿರುವ ಸೇವೆ ಅನನ್ಯ. ಶಿಕ್ಷಣ ತಜ್ಞರಾಗಿ ಅವರು ಕೈಗೊಂಡ ಕ್ರಾಂತಿಕಾರಿ ನಿರ್ಣಯಗಳು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಪಾತ್ರವಹಿಸಿದೆ. ಇಂದಿನ ಮಕ್ಕಳಿಗೆ ಸ್ಪೂರ್ತಿದಾಯಕವಾಗಿದ್ದಾರೆ ಎಂದರು.
ಮಹನೀಯರ ಹೋರಾಟ, ಸಾಧನೆ ಇತಿಹಾಸ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಅವರು ತೋರಿದ ಸನ್ಮಾರ್ಗದಲ್ಲಿ ನಡೆಯಬೇಕು.
ಮಕ್ಕಳನ್ನು ತಿದ್ದಿತಿಡಿ ಸರಿ ದಾರಿಗೆ ತಂದು ಉತ್ತಮ ಪ್ರಜೆಗಳಾಗಿ ಶಿಕ್ಷಕರನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂಧರ್ಭದಲ್ಲಿ ಪ್ರಾಂಶುಪಾಲರಾದ ಕೇಶವರೆಡ್ಡಿ, ಉಪ ಪ್ರಾಂಶುಪಾಲರಾದ ರಮೇಶ್, ಶಿಕ್ಷಕರಾದ ಚನ್ನಕೃಷ್ಣಪ್ಪ ಮುಖಂಡರಾದ ಲಕ್ಷ್ಮಿರೆಡ್ಡಿ ಇದ್ದರು.