ಶಿಕ್ಷಕ-ವಿದ್ಯಾರ್ಥಿ ಸಂಬಂಧ ಗಟ್ಟಿಗೊಳ್ಳಲಿ : ಬಟಗೇರಿ
ಕಲಬುರಗಿ:ಸೆ.05: ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳು ಶಿಕ್ಷಕರ ಬಗ್ಗೆ ಅಪಾರವಾದ ಗೌರವ, ಭಕ್ತಿ, ಶೃದ್ಧೆಯಿತ್ತು. ಆಧುನೀಕರಣಕ್ಕೆ ಒಳಗಾಗಿ ಪ್ರಸ್ತುತ ಸನ್ನಿವೇಶಗಳಲ್ಲಿ ಶಿಕ್ಷಕ-ವಿದ್ಯಾರ್ಥಿ ನಡುವಿನ ಸಂಬಂಧ ಸಡಿಲವಾಗುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ, ಇದು ಗುರು-ಶಿಷ್ಯರ ಸಂಬಂಧವಾಗಿದ್ದು ಗಟ್ಟಿಗೊಳ್ಳಬೇಕಾಗಿದೆ ಎಂದು ಆಶಯ ವ್ಯಕ್ತಪಡಿಸಿದರು.
ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಗುರುವಾರ ಜರುಗಿದ ‘ಶಿಕ್ಷಕರ ದಿನಾಚರಣೆ’ಯ ಕಾರ್ಯಕ್ರಮವನ್ನು ಡಾ.ಸರ್ವೆಪಲ್ಲಿ ರಾಧಾಕೃಷ್ಣನ್‍ರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ, ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ಆಸ್ಮಾ ಜಬೀನ್, ಮಲ್ಲಿಕಾರ್ಜುನ ದೊಡ್ಡಮನಿ, ನಯಿಮಾ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಕೀರ್ತಿ ಬುಜುರಕೆ, ಸುವರ್ಣಲತಾ ಭಂಡಾರಿ, ಗ್ರಂಥಪಾಲ ಲಿಂಗರಾಜ ಹಿರೇಗೌಡ, ದ್ವಿ.ದ.ಸ ರಾಮಚಂದ್ರ ಚವ್ಹಾಣ, ಅತಿಥಿ ಉಪನ್ಯಾಸಕ ಮೊಹಮ್ಮದ್ ಅಬ್ದುಲ್ ಸಮದ್, ಸೇವಕ ಭಾಗಣ್ಣ ಹರನೂರ ಹಾಗೂ ವಿದ್ಯಾರ್ಥಿಗಳಿದ್ದರು.