ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆ ಕಾರ್ಮಿಕರ ಕೆಲಸಕ್ಕೆ ನೇಮಿಸಿಕೊಂಡಲ್ಲಿ ಮಾಲೀಕರ ಮೇಲೆ ಕ್ರಮಕೈಗೊಳ್ಳಬೇಕು:ಹಿರಿಯ ನ್ಯಾಯಾಧೀಶ ಶ್ರೀನಿವಾಸ ನವಲೆ
ಕಲಬುರಗಿ:ಸೆ.05: ಬಾಲಕಾರ್ಮಿಕರನ್ನು ಮತ್ತು ಕಿಶೋರಾವಸ್ಥೆ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಕೊಂಡಲ್ಲಿ ತಪ್ಪಿತಸ್ಥ ಮಾಲೀಕರ ಮೇಲೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಅರಿವು ಮೂಡಿಸುವುದರ ಜೊತೆಗೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು ಎಂದು ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಗೌರವಾನ್ವಿತ ಶ್ರೀ ಶ್ರೀನಿವಾಸ ನವಲೆ ಹೇಳಿದರು.