30 ದಿನದೊಳಗೆ ವಿದ್ಯುತ್‍ ಬಿಲ್ಪಾವತಿಸದಿದ್ದರೆ ಸಂಪರ್ಕ ಕಡಿತ
ಕಲಬುರಗಿ, ಸೆ.5: ಬಿಲ್ ನೀಡಿದ ನಂತರದ 30 ದಿನಗಳೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆಇಆರ್‍ಸಿ) ನಿಯಾಮವಳಿ ಅನ್ವಯ ಅಂಥ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಜೆಸ್ಕಾಂ ತಿಳಿಸಿದೆ.
ಸೆ. 30 ರೊಳಗೆ ಸರ್ಕಾರಿ, ಅರೆಸರ್ಕಾರಿ, ಇತರೆ ಎಲ್ಲಾ ಸಂಸ್ಥೆಗಳು, ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಇನ್ನಿತರ ಎಲ್ಲಾ ಗ್ರಾಹಕರು ನಿಗದಿತ ಅವಧಿಯಲ್ಲಿ ವಿದ್ಯುತ್ ಬಿಲ್ ಪಾವತಿಸಿ ಜೆಸ್ಕಾಂನೊಂದಿಗೆ ಸಹಕರಿಸುವಂತೆ ಕೋರಿದೆ.