ಗುಣತೀರ್ಥ ವಾಡಿ ಗ್ರಾಮಕ್ಕೆ ಉಸ್ತುವಾರಿ ಸಚಿವ ಖಂಡ್ರೆ ಭೇಟಿ
ಬಸವಕಲ್ಯಾಣ: ಸೆ.5:ತಾಲೂಕಿನ ಗುಣತೀರ್ಥವಾಡಿ ಗ್ರಾಮಕ್ಕೆ ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಕೊಲೆಯಾದ ಯುವತಿ ಭಾಗ್ಯಶ್ರೀ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ನಿಮ್ಮ ಮಗಳ ಕೊಲೆ ಘಟನೆಯು ನಮ್ಮೆಲ್ಲರ ಮನಸ್ಸು ಮಿಡಕಿಸಿದೆ. ಇದು ಅತ್ಯಂತ ಪೈಶಾಚಿಕ ಕೃತ್ಯವಾಗಿದ್ದು ಕು. ಭಾಗ್ಯಶ್ರೀ ಆತ್ಮಕ್ಕೆ ಶಾಂತಿ ಸಿಗಲಿ ಅವಳ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ನೀಡಲೆಂದು ಪ್ರಾರ್ಥಿಸಿದರು.
ಯುವತಿಯ ಕುಟುಂಬಸ್ಥರು ಬಡವರಾಗಿದ್ದು ಘಟನೆಯಿಂದ ನೊಂದ ಕುಟುಂಬಕ್ಕೆ ಸಹಾಯವಾಗಲೆಂದು ಈಶ್ವರ ಖಂಡ್ರೆ ಅವರು ವೈಯಕ್ತಿಕವಾಗಿ ಧನ ಸಹಾಯ ಮಾಡಿ ಇಂದು ಮಧ್ಯಾಹ್ನದ ವರೆಗೆ ಸರ್ಕಾರದ ವತಿಯಿಂದ ಹಚ್ಚಿನ 4 ಲಕ್ಷ ರೂ ಗಳ ಚೆಕ್ ಅನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಂದಿನ ಹಂತದಲ್ಲಿ ಇನ್ನು ಹೆಚ್ಚಿನ ಪರಿಹಾರ ಜೊತೆಗೆ ಎಲ್ಲಾ ಅಗತ್ಯ ನೆರವು ನೀಡುವದಾಗಿ ಭರವಸೆ ನೀಡಿದರು.
ಪ್ರಕರಣ ಸಚಿವ ಈಶ್ವರ ಖಂಡ್ರೆ ಅವರ ಗಮನಕ್ಕೆ ಬಂದ ತಕ್ಷಣ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಿಗೆ ಕರೆ ಮಾಡಿ ಈ ಪ್ರಕರಣ ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೊಲೆ ಮಾಡಿರುವ ಆರೋಪಿಗಳನ್ನು ಆದಷ್ಟು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಸೂಚಿಸಿದ್ದರು
ಈಗಾಗಲೇ ಪೆÇಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶ್ವಸಿಯಾಗಿದ್ದು ಆರೋಪಿಗಳಿಗೆ ಕಾನೂನು ಅಡಿಯಲ್ಲಿ ಅತಿ ಕಠಿಣ ಶಿಕ್ಷೆ ಆಗುವ ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದರು. ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ್ ಸೇರಿದಂತೆ ಜಿಲ್ಲೆ ಹಿರಿಯ ಅಧಿಕಾರಿಗಳು ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.