ಪತ್ರಿಕಾ ವಿತರಕರ ಸೇವೆ ಅನನ್ಯ: ಹಿರೋಳಿಕರ್
ಆಳಂದ:ಸೆ.5: ದಿನಪತ್ರಿಕೆ ವಿತರಕರು ಬೆಳಗಿನ ಪ್ರಥಮ ಬೆಳಕಿನೊಂದಿಗೆ ನಾಡಿನ ಜನತೆಗೆ ಸುದ್ದಿ ತಲುಪಿಸುವ ಮಹತ್ವದ ಕರ್ತವ್ಯವನ್ನು ನಿಭಾಯಿಸುತ್ತಾರೆ. ಅವರ ಶ್ರಮ ಮತ್ತು ಸೇವೆಯನ್ನು ಗೌರವಿಸುವುದು ನಮ್ಮ ಕರ್ತವ್ಯವಾಗಬೇಕಿದೆ ಎಂದು ಕದಂಬಾ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸುನೀಲ ಹಿರೋಳಿಕರ್ ಅವರು ಇಂದಿಲ್ಲಿ ಹೇಳಿದರು.
ಪಟ್ಟಣದ ಕದಂಬಾ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡ ವಿಶ್ವ ಪತ್ರಿಕೆ ವಿತರಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಥಳೀಯ ಪತಿಕಾ ವಿತರಕರಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಕಡಿಮೆ ಗಳಿಕೆಯಲ್ಲಿ ಮಳೆ, ಚಳಿ ಎನ್ನದೇ ಓದುಗರಿಗೆ ಬೆಳಗಿನ ಜಾವ ಪತ್ರಿಕೆಗಳನ್ನು ತಲುಪಿಸುವುದು ಇಂದು ಸಹಸಮಯವಾಗಿದೆ. ಈ ಕೆಲಸವನ್ನು ನಿತ್ಯ ಪತ್ರಿಕೆಯನ್ನು ಓದುಗರ ಮನೆಬಾಗಿಲಿಗೆ ತಲುಪಿಸುವ ಮೂಲಕ ಸೇವೆಯನ್ನು ನಿರ್ವಹಿಸುತ್ತಿರುವ ಪತ್ರಿಕೆ ವಿತರಕರ ಕಾರ್ಯವೂ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಸಮಾಜದಲ್ಲಿ ಇಂದು ಪತ್ರಿಕೆಗಳ ಓದುಗರು ಹೆಚ್ಚಾಗಬೇಕು. ಪತ್ರಿಕೆಗಳನ್ನು ಕೊಂಡು ಓದುವ ಮನೋಭಾವ ಬೆಳೆಸಿಕೊಂಡರೆ ಪತ್ರಿಕೆ ಸಂಸ್ಥೆಯಗಳು ಮತ್ತು ಇದರಲ್ಲಿ ದುಡಿಯುವ ಸಿಬ್ಬಂದಿಗಳು ಬದುಕು ಕಟ್ಟಿಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪತ್ರಿಕಾ ಪತ್ರಿಕೆ ಓದುಗರು ಹಣಕೊಟ್ಟು ಪತ್ರಿಕೆಗಳನ್ನು ತೆಗೆದುಕೊಳ್ಳುವರ ಸಂಖ್ಯೆ ಹೆಚ್ಚಾದರೆ ವಿತರಕರ ಬದುಕಿಗೆ ಆಶ್ರವಾಗಿ ನಿಲ್ಲುತ್ತದೆ ಎಂದು ಹೇಳಿದರು. ಸಂಸ್ಥೆಯ ನಿರ್ದೇಶಕರಾದ ಸುನಿಲ ಹಿರೋಳಿಕರ್ ಅವರು ಪಟ್ಟಣದ ಪತ್ರಿಕೆ ವಿತಕರಾದ ಮಹೇಶ ಸಾಕರೆ ಅವರನ್ನು ಸನ್ಮಾನಿಸಿದರು.
ಈ ಸಂದರ್ಭಧಲ್ಲಿ ಸಂಸ್ಥೆಯ ಹಿರಿಯ ಸಿಬ್ಬಂದಿ, ಶಿಕ್ಷಕರು, ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾರೋಪದ ವೇಳೆ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರಶಸ್ತಿ ಪುರಸ್ಕøತಗೊಳಿಸಿ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯವಾಯಿತು.