ಮಣ್ಣಿನ, ಫೈಬರ್ ಗಣೇಶ ಮೂರ್ತಿ ಸ್ಥಾಪನೆಗೆ ಆರ್ಥಿಕ ಸಹಾಯ
ವಿಜಯಪುರ,ಸೆ.5: ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ, ಮಣ್ಣಿನ ಮೂರ್ತಿಗಳನ್ನು ಹಾಗೂ ಫೈಬರ್ ಗಣೇಶ ಮೂರ್ತಿಗಳನ್ನು ಸ್ಥಾಪಿಸಿದರೆ, ಆರ್ಥಿಕ ಸಹಾಯ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದರು.
ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಆವರಣಲ್ಲಿರುವ ಶಿವಾನುಭವ ಮಂಟಪದಲ್ಲಿ ಮಂಗಳವಾರ ಸಂಜೆ ನಡೆದ ಸ್ವಾಮಿ ವಿವೇಕಾನಂದ ಸೇನೆ ಶ್ರೀ ಗಜಾನನ ಮಹಾಮಂಡಳ-2024 ಸಭೆಯಲ್ಲಿ ಅವರು ಮಾತನಾಡಿದರು.
ಪರಿಸರ ರಕ್ಷಣೆಯ ಸಂಕಲ್ಪದೊಂದಿಗೆ ಪರಿಸರಕ್ಕೆ ಮಾರಕವಾದ ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ, ಫೈಬರ್ ಹಾಗೂ ಮಣ್ಣಿನ ಮೂರ್ತಿಗಳ ಸ್ಥಾಪನೆಗೆ ನಗರದಲ್ಲಿರುವ 500ಕ್ಕೂ ಹೆಚ್ಚು ಗಜಾನನ ಮಂಡಳಿಗಳು ಮುಂದಾದರೆ, ನಗರ ಶಾಸಕರು ಹಾಗೂ ತಂದೆಯವರಾದ ಬಸನಗೌಡ ಪಾಟೀಲ ಯತ್ನಾಳ ಅವರು, ಆರ್ಥಿಕ ಸಹಾಯ ಮಾಡುವುದಾಗಿ ತಿಳಿಸಿದ್ದು, ಹೀಗಾಗಿ ಪರಿಸರ ಸಂರಕ್ಷಣೆಗೆ ಎಲ್ಲ ಮಂಡಳಿಗಳು ಕೈಜೋಡಿಸಬೇಕು ಎಂದು ಹೇಳಿದರು.
ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷ ರಾಘವ್ ಅಣ್ಣಿಗೇರಿ ಮಾತನಾಡಿ, ನಗರ ಶಾಸಕÀ ಬಸನಗೌಡ ಪಾಟೀಲ ಯತ್ನಾಳ ಅವರ ನಿರ್ದೇಶನದಂತೆ, ನಗರದಲ್ಲಿರುವ ಪ್ರತಿ ಗಜಾನನ ಮಂಡಳಿಗಳಿಗೆ ಹಿಂದೂಗಳ ಪವಿತ್ರ ಗ್ರಂಥ ಭಗವದ್ಗೀತೆ ಪುಸ್ತಕ ವಿತರಿಸಲು ನಿರ್ಧರಿಸಲಾಗಿದ್ದು, ಗಜಾನನ ಮಹಾಮಂಡಳ ವೇದಿಕೆಗೆ ಉಕ್ಕಿನ ಮನುಷ್ಯ ಸರ್ಧಾರ್ ವಲ್ಲಭಬಾಯಿ ಪಟೇಲ್ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ. ಪರಿಸರ ಸಂರಕ್ಷಣೆಗಾಗಿ ನಗರ ಪ್ರದೇಶದಲ್ಲಿ ಸಸಿ ನೆಟ್ಟು ಗಿಡ ಬೆಳಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.
ಪ್ರತಿ ಗಜಾನನ ಮಂಡಳಿಗಳ ವೇದಿಕೆಯಲ್ಲಿ ನಡೆದಾಡುವ ದೇವರಾಗಿದ್ದ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳ ಭಾವಚಿತ್ರ ಇಡಲು ಕೋರಿ, ಶಾಂತಿ ಸೌಹಾರ್ದತೆಯಿಂದ ಹಾಗೂ ಪರಿಸರ ಸ್ನೇಹಿ ಗಣೇಶೋತ್ಸವವನ್ನು ಆಚರಿಸಲು ಕರೆ ನೀಡಿದರು.
ಡಿಎಸ್‍ಪಿ ಬಸವರಾಜ ಎಲಿಗಾರ ಮಾತನಾಡಿ, ಗಜಾನನ ಮಂಡಳಿಗಳು ಮೆರವಣಿಗೆಯ ಸಂದರ್ಭದಲ್ಲಿ ಭಕ್ತಿ ಗೀತೆಗಳನ್ನು ಹಾಕುವುದರೊಂದಿಗೆ ನಮ್ಮ ಸಂಸ್ಕøತಿಯನ್ನು ಉಳಿಸಬೇಕು. ಸಾರ್ವಜನಿಕರು, ವಯೋವೃದ್ಧರಿಗೆ ತೊಂದರೆಯಾಗದಂತೆ ಮತ್ತು ಶಬ್ದಮಾಲಿನ್ಯದಿಂದ ಉಂಟಾಗುವ ಹಾನಿ ತಡೆಗಟ್ಟಲು ಗಜಾನನ ಮಂಡಳಿಗಳು ಪೊಲೀಸ್ ಇಲಾಖೆ ಜತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಸಿದ್ದೇಶ್ವರ ಸಂಸ್ಥೆ ಉಪಾಧ್ಯಕ್ಷ ಸಂಗನಬಸಪ್ಪ ಸಜ್ಜನ, ನಿರ್ದೇಶಕರಾದ ಸಾಯಬಣ್ಣ ಭೋವಿ, ಸದಾಶಿವ ಗುಡ್ಡೋಡಗಿ, ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿರ್ದೇಶಕ ಗುರು ಗಚ್ಚಿನಮಠ, ವಿಡಿಎ ಮಾಜಿ ಅಧ್ಯಕ್ಷ ಪರಶುರಾಮ ರಜಪೂತ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ, ಮಹಾನಗರ ಪಾಲಿಕೆ ಸದಸ್ಯರಾದ ರಾಜಶೇಖರ ಮಗಿಮಠ, ಎಂ.ಎಸ್.ಕರಡಿ, ಪ್ರೇಮಾನಂದ ಬಿರಾದಾರ, ಜವಾಹರ ಗೋಸಾವಿ, ಕಿರಣ ಪಾಟೀಲ, ರಾಜಶೇಖರ ಕುರಿಯವರ, ಕುಮಾರ ಗಡಗಿ, ವಿಠ್ಠಲ ಹೊಸಪೇಟ, ಯುವ ಮುಖಂಡರಾದ ಸಂತೋಷ ಪಾಟೀಲ, ಸಚಿನ ಕುಮಸಿ, ಗಿರೀಶ ಬಿರಾದಾರ, ಚಂದ್ರು ಚೌಧÀರಿ, ಸಂತೋಷ ತಳಕೇರಿ, ಪ್ರಕಾಶ ಚವ್ಹಾಣ, ಹನುಮಂತ ಚಿಂಚಲಿ, ದತ್ತಾ ಗೋಲಾಂಡೆ ಸೇರಿದಂತೆ ನಗರದ ಸಮಸ್ತ ಗಜಾನನ ಮಂಡಳಿಗಳ ಪದಾಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ಅಭಿಮಾನಿಗಳು ಉಪಸ್ಥಿತರಿದ್ದರು.
ಪದಾಧಿಕಾರಿಗಳ ನೇಮಕ
ಸ್ವಾಮಿ ವಿವೇಕಾನಂದ ಸೇನೆ ಶ್ರೀ ಗಜಾನನ ಮಹಾಮಂಡಳ-2024ರ ಅಧ್ಯಕ್ಷರನ್ನಾಗಿ ಸಂದೀಪ ಪಂಗಡವಾಲೆ, ಉಪಾಧ್ಯಕ್ಷರನ್ನಾಗಿ ಪ್ರಶಾಂತ ದೇಸಾಯಿ, ಪ್ರಧಾನ ಕಾರ್ಯದರ್ಶಿಗಳನ್ನಾಗಿ ಪರಶುರಾಮ ಕೊಂಚಿಕೋರವೇರ, ಕರಮವೀರಸಿಂಗ್ ಸಂಧು, ಸಚೀನ ಬಡಾವಣೆ, ಕಾರ್ಯದರ್ಶಿಗಳನ್ನಾಗಿ ಸಂತೋಷ ತೆಲಸಂಗ, ರವಿ ಅಗಸರ, ಶಿವು ಭಜಂತ್ರಿ, ಮನೋಜ ಸುರಪುರ ಅವರನ್ನು ನೇಮಕ ಮಾಡಲಾಗಿದೆ ಎಂದು ಸ್ವಾಮಿ ವಿವೇಕಾನಂದ ಸೇನೆ ಅಧ್ಯಕ್ಷÀ ರಾಘವ್ ಅಣ್ಣಿಗೇರಿ ತಿಳಿಸಿದ್ದಾರೆ.
ಬಹುಮಾನ ವಿವರ
ಅತ್ಯುತ್ತಮ ಪರಿಸರ ಸ್ನೇಹಿ ಮಣ್ಣಿನ ಗಣೇಶ ವಿಗ್ರಹಕ್ಕೆ, ಹಿಂದೂ ಸಾಂಪ್ರದಾಯಿಕ ವಾದ್ಯಗಳ ಭವ್ಯ ಮೆರವಣಿಗೆಗೆ ಹಾಗೂ ಉತ್ತಮ ಅಲಂಕಾರ ಮಾಡಿದ ಗಣೇಶ ಮಂಡಳಿಗೆ ತಲಾ ರೂ.21 ಸಾವಿರ ಬಹುಮಾನ ನೀಡಲು ನಿರ್ಣಯಿಸಲಾಗಿದೆ.