ಭಾರತ ಸೇವಾದಳದಲ್ಲಿ ಶಿಕ್ಷಕರ ದಿನಾಚರಣೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ. ಸೆ. 5; ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರು  ಶಿಕ್ಷಣದ ಬಗ್ಗೆ ಅತ್ಯಂತ ಗೌರವ, ಪ್ರೀತಿ, ನಿಷ್ಠೆಯನ್ನು ಹೊಂದಿದ್ದರು ಎಂದು ಭಾರತ ಸೇವಾದಳದ ವಲಯ ಸಂಘಟಕರಾದ ಅಣ್ಣಯ್ಯನವರು ಅಭಿಪ್ರಾಯಪಟ್ಟರು.  ಇಂದು ಭಾರತ ಸೇವಾದಳ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ ಸರ್ವಪಲ್ಲಿ ರಾಧಾಕೃಷ್ಣನ್ ರವರ ಜಯಂತಿ ಆಚರಣೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ನಂತರ ಮಾತನಾಡಿದ ಅವರು ಸ್ವತಃ ಶಿಕ್ಷಕರಾಗಿ ಹಲವಾರು ವರ್ಷಗಳ ಕಾಲ ಸೇವೆಗೈದಿರುವ ಡಾ.ರಾಧಾಕೃಷ್ಣನ್, ಭಾರತ ಕಂಡ ಅಗ್ರಗಣ್ಯ ಶಿಕ್ಷಕರಲ್ಲಿ ಪ್ರಮುಖರಾಗಿದ್ದಾರೆ. ಅವರು ಮದ್ರಾಸಿನ ಕ್ರಿಶ್ಚಿಯನ್ ಕಾಲೇಜಿನಲ್ಲಿ  ಶಿಕ್ಷಣ ಪಡೆದಿದ್ದರು. ಶಿಕ್ಷಕರಾಗಿದ್ದ ‘ಡಾ. ಸರ್ವಪಲ್ಲಿ ರಾಧಾಕೃಷ್ಣನ್’ ೧೯೬೨ ರಲ್ಲಿ ಭಾರತದ ರಾಷ್ಟ್ರಪತಿಯಾಗಿದ್ದರು. ಇವರು ಒಬ್ಬ ಶಿಕ್ಷಕರಾಗಿಯೂ ಸೇವೆಯನ್ನು ಸಲ್ಲಿಸಿದ್ದರು.ಇವರು ಓರ್ವ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಇವರ ಜನ್ಮದಿನವಾದ ಸೆಪ್ಟೆಂಬರ್ ೫ ರಂದು ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯಾಗಿಆಚರಿಸಲಾಗುತ್ತದೆ.೧೯೫೪ ರಲ್ಲಿ ಪ್ರತಿಷ್ಠಿತ ‘ಭಾರತ ರತ್ನ ಪ್ರಶಸ್ತಿ’ ಗೌರವ ಇವರಿಗೆ ಸಂದಾಯವಾಗಿದೆ. ಇವರ ಜೀವನ ಯುವಕರಿಗೆ, ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕೆಂದು ತಿಳಿಸಿದರು. ಜಿಲ್ಲಾ ಕಾರ್ಯದರ್ಶಿ ನರೇನಹಳ್ಳಿ ಅರುಣ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಕೋಶಾಧ್ಯಕ್ಷ ಶಿವಣ್ಣ ನಿವೃತ್ತ ಶಿಕ್ಷಕರಾದ  ಎಸ್ ಆರ್ ತಿಪ್ಪೇಸ್ವಾಮಿ ಮತ್ತು ಎನ್ಕೆ ರಾಜಪ್ಪ ಚಿದಾನಂದ ಮೂರ್ತಿ ಉಪಸ್ಥಿತರಿದ್ದರು.