ಬಸವಕಲ್ಯಾಣ ಯುವತಿ ಅತ್ಯಾಚಾರ: ಈಶ್ವರಸಿಂಗ್ ಠಾಕೂರ್ ಖಂಡನೆ
ಬೀದರ: ಸೆ.5:ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿಯಲ್ಲಿ 19 ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ನಡೆದು ಭೀಕರ ಕೊಲೆ ಮಾಡಿರುವ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಭಾರತೀಯ ಜನತಾ ಪಕ್ಷದ ವಿಭಾಗೀಯ ಸಹಪ್ರಭಾರಿ ಹಾಗೂ ಬೀದರ ವಿಧಾನಸಭಾ ಕ್ಷೇತ್ರದ ನಾಯಕ ಈಶ್ವರಸಿಂಗ್ ಠಾಕೂರ್ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಜಾರಿಗೆ ಬಂದ ನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಒಂದರ ಮೇಲೊಂದು ಅತ್ಯಾಚಾರ ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಅತ್ಯಾಚಾರಿಗಳಿಗೆ, ಕೊಲೆಗಡುಕರಿಗೆ ಭಯವೇ ಇಲ್ಲದಂತಾಗಿದೆ. ಗೃಹಸಚಿವರು ಈ ಕುರಿತು ಸಮಗ್ರ ತನಿಖೆ ನಡೆಸಿ ಆರೋಪಿಗೆ ಕಾನೂನಿನಡಿಯಲ್ಲಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಠಾಕೂರ ತಿಳಿಸಿದ್ದಾರೆ. ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ಒದಗಿಸಿ ನ್ಯಾಯ ದೊರಕಿಸಿಕೊಡಬೇಕೆಂದು ತಿಳಿಸಿದ್ದಾರೆ.