ಕೊಳ್ಳೇಗಾಲದ ಅರಣ್ಯಾಧಿಕಾರಿ ಅನಂತರಾಮುಗೆ ಮುಖ್ಯಮಂತ್ರಿ ಪದಕ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ.05-ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಕರ್ನಾಟಕ ಅರಣ್ಯ ಇಲಾಖೆಯಲ್ಲಿ 2022 ಮತ್ತು 2023ನೇ ಸಾಲಿನಲ್ಲಿ ಗಣನೀಯ ಸೇವೆ ಸಲ್ಲಿಸಿದ ಕೊಳ್ಳೇಗಾಲದ ಉಪ ವಲಯ ಅರಣ್ಯಾಧಿಕಾರಿ ಹಾಗೂ ಮೋಜಣಿದಾರ ಅನಂತರಾಮು.ಬಿ. ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ಪ್ರದಾನ ಮಾಡಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂದಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ.
ಇದು ಅತ್ಯಂತ ನಿಷ್ಠುರವಾಗಿದೆ, ಅರಣ್ಯಾಧಿಕಾರಿಗಳೂ ಅμÉ್ಟೀ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು. ಈ ನಿಟ್ಟಿನಲ್ಲಿ ಅನಂತರಾಮು ರವರು ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಅನಂತರಾಮು ರವರ ಕಾರ್ಯವನ್ನು ಶ್ಲಾಘಿಸಿದರು.
ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ ಒಳಗೆ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ, ಆಗ ಮಾನವ ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ ಎಂದರು.
ಈ ಸಂದರ್ಭದಲ್ಲಿ ಅರಣ್ಯ ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ್ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅರಣ್ಯ ಪಡೆ ಮುಖ್ಯಸ್ಥರಾದ ಬ್ರಿಜೇಶ್‍ಕುಮಾರ್ ದೀಕ್ಷಿತ್ ಭಾಗವಹಿಸಿದ್ದರು