ಗಾಂಧಿ ಜಯಂತಿ ಪ್ರಯುಕ್ತ ಆರೋಗ್ಯ ತಪಾಸಣೆ
ಔರಾದ :ಅ.3: ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜಯಂತಿಯ ಪ್ರಯುಕ್ತ ಗ್ರಾಮ ಆರೋಗ್ಯ ಅಭಿಯಾನದಡಿಯಲ್ಲಿ ಆರೋಗ್ಯ ತಪಾಸಣೆ ಕಾರ್ಯಕ್ರಮ ಜರುಗಿತು.
ಬಾದಲಗಾಂವ ಪಂಚಾಯತನಲ್ಲಿ ಪಿಡಿಒ ಅವರು ಮಹಾತ್ಮ ಗಾಂಧಿಜೀ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಯವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಆರೋಗ್ಯ ತಪಾಸಣೆಗೆ ಚಾಲನೆ ನೀಡಿದರು.
ನಾರಾಯಣಪುರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯ ಅಧಿಕಾರಿ ಮೋಹಿನಿ ಅವರಿಂದ ಅಧಿಕ ರಕ್ತದೊತ್ತಡ, ಮಧುಮೇಹ, ರಕ್ತಹೀನತೆ, ಮಕ್ಕಳ ಅಪೌಷ್ಟಿಕತೆಯ ಪರೀಕ್ಷೆ ಸೇರಿದಂತೆ ವಿವಿಧ ರೀತಿಯ ಆರೋಗ್ಯ ತಪಾಸಣೆ ಜರುಗಿತು.