ಗಾಂಧೀಜಿ, ಶಾಸ್ತ್ರಿ ಜಯಂತಿ: ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ
ವಿಜಯಪುರ,ಅ.3:ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು.
ಬಾಪೂಜಿ ಪ್ರಬಂಧ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಪ್ರೀತಿ ಬಿಜ್ಜರಗಿ, ಸಾನಿಯಾ ಕೊಂಡಿ, ಬೋರಮ್ಮ ತಾವರಖೇಡ ಹಾಗೂ ಪದವಿಪೂರ್ವ ವಿಭಾಗದಲ್ಲಿ ಆರತಿ ಕುಂಬಾರ, ರಾಗಿಣಿ ಬಗಲಿ, ಭಾಗ್ಯಶ್ರೀ ಮಡಿವಾಳರ ಮತ್ತು ಪದವಿ, ಸ್ನಾತಕೋತ್ತರ ಪದವಿ ವಿಭಾಗದಲ್ಲಿ ನಸೀಮಾ ಚಪ್ಪರಬಂದ, ಸುಚಿತ್ರಾ ಬಿರಾದಾರ ಹಾಗೂ ದೀಪಾ ಚೋರಮುಲೆ ಅವರಿಗೆ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.
ಜಯಂತಿ ಅಂಗವಾಗಿ ಕಾರ್ಯಕ್ರಮಕ್ಕೂ ಮೊದಲು ನಗರದ ಗಾಂಧಿ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಪ್ರತಿಮೆಗಳಿಗೆ ಮಾಲಾಪರ್ಣೆ ಮಾಡಿ ಗೌರವ ಸಲ್ಲಿಸಲಾಯಿತು. ಬೆಳಿಗ್ಗೆ ತೊರವಿಯಲ್ಲಿ ಜಿಲ್ಲಾಡಳಿತದಿಂದ ಸ್ವಚ್ಚತಾ ಶ್ರಮದಾನ ಕಾರ್ಯಕ್ರಮ ನಡೆಯಿತು. ಜಯಂತಿ ಕಾರ್ಯಕ್ರಮದಲ್ಲಿ ಸ್ವಚ್ಚತಾ ಪ್ರತಿಜ್ಞಾ ವಿಧಿ ಭೋಧಿಸಲಾಯಿತು.
ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಮಹಾನಗರ ಪಾಲಿಕೆ ಆಯುಕ್ತÀ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡ್ಡೆ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ ಅಜೂರ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್.ಎಚ್. ನಾಗೂರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಮರೇಶ ದೊಡಮನಿ, ಯುವ ಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕÀ ಸಂತೋಷ ಭೋವಿ, ನಿವೃತ್ತ ಶಿಕ್ಷಕÀ ಎ.ಎಚ್. ಮಮದಾಪೂರ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಗೂ ವಿವಿಧ ಶಾಲಾ-ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.