ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ವಿರೋಧಿಸಿ ರೈತರ ಪ್ರತಿಭಟನೆ
ಸಂಜೆವಾಣಿ ವಾರ್ತೆ
ದಾವಣಗೆರೆ.ಸೆ.೫: ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆ ವಿರೋಧಿಸಿ  ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಕೋಡಿಹಳ್ಳಿ ಚಂದ್ರಶೇಖರ್ ಬಣ) ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.ದಾವಣಗೆರೆ ತಹಶೀಲ್ದಾರ್ ಕಚೇರಿಯಿಂದ ಮೆರವಣಿಗೆ ಪ್ರಾರಂಭಿಸಿದ ಪ್ರತಿಭಟನಾಕಾರರು ಮಹಾತ್ಮ ಗಾಂಧಿವೃತ್ತ, ಜಯದೇವ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಬೆಸ್ಕಾಂ ಅಽಕ್ಷಕ ಇಂಜಿನಿಯರ್ ಕಚೇರಿ ಎದುರು ಪ್ರತಿ ಭಟನೆ ನಡೆಸಿದರು. ಕೃಷಿ ಪಂಪ್‌ಸೆಟ್‌ಗಳಿಗೆ ಆಧಾರ್ ಜೋಡಣೆಯ ಆದೇಶದ ಪ್ರತಿ ಸುಡುವ ಮೂಲಕ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾ ಸಂಘದ ಕಾರ್ಯಾಧ್ಯಕ್ಷ ಚಿನ್ನಸಮುದ್ರ ಶೇಖರನಾಯ್ಕ ಮಾತನಾಡಿ, ರಾಜ್ಯ ಸರ್ಕಾರ ಕೃಷಿ ಪಂಪ್‌ಸೆಟ್ ಗಳಿಗೆ ಆಧಾರ್ ಜೋಡಣೆ ಮೂಲಕ ಮೀಟರ್ ಅಳವಡಿಸಿ ಶುಲ್ಕ ವಿಽಸುವ ಹುನ್ನಾರ ನಡೆಸಿದೆ. ರೈತರು ಕೇವಲ ತಮ್ಮ ಮನೆಗಳಿಗೆ ಬೆಳೆ ಬೆಳೆಯುವುದಿಲ್ಲ. ಇಡೀ ಸಮಾಜಕ್ಕಾಗಿ ಅನ್ನ ನೀಡುವ ಅನ್ನದಾತರ ವಿರೋಽ ಕ್ರಮವನ್ನ ಸರ್ಕಾರ ಅನುಸರಿಸುತ್ತಿದೆ. ಮೀಟರ್ ಅಳವಡಿಕೆ, ಶುಲ್ಕ ವಿಽಸುವ ಮೂಲಕ ಮುಂದಿನ ದಿನಗಳಲ್ಲಿ ವಿದ್ಯುತ್ ವಲಯವನ್ನೇ ಖಾಸಗೀಕರಣ ಮಾಡಲು ಹೊರಟಿದೆ. ಕೂಡಲೇ ಆಧಾರ್ ಜೋಡಣೆ ಆದೇಶವನ್ನ ಹಿಂಪಡೆ ಯಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.