ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಕಲಬುರಗಿ,ಸೆ 4: ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಅಳಂದ ತಾಲೂಕಿನ ಮಾಡಿಯಾಳ ಗ್ರಾಮದ ಜಯಪ್ರಕಾಶ ನಾರಾಯಣ ಪ್ರೌಢ ಶಾಲೆಯ ವಿದ್ಯಾರ್ಥಿ ಸುಧಾಕರ್ ನಾಗೇಶ್ ದುತ್ತರಗಿ ಜಿಲ್ಲಾಮಟ್ಟದ 48 – 51ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತನಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಶಾಮರಾವ್ ಪ್ಯಾಟಿ ಅವರು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗೆ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರು ಕಿರಣಕುಮಾರ ಮಂಟಗಿ, ಇಂಗ್ಲಿಷ್ ಶಿಕ್ಷಕಿ ಶಿವಲೀಲಾ ಗುತ್ತೇದಾರ್ , ಅರವಿಂದ್ ಮೇತ್ರಿ ಹಾಜರಿದ್ದರು.