ಕೂಡು ರಸ್ತೆ ಕಾಮಗಾರಿಗೆ ಸಚಿವ ಶಿವಾನಂದ ಪಾಟೀಲ ಭೂಮಿಪೂಜೆ
ಬಸವನಬಾಗೇವಾಡಿ,ಸೆ. 4:ಪಟ್ಟಣದ ಹಂಜಗಿ ಮಿಲ್ದಿಂದ ಜೈನಾಪುರ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಕೂಡುವ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯ ಅನುದಾನದಡಿ 2.35 ಕಿಮೀ ದಿಂದ 6 ಕಿಮೀ ರವರೆಗೆ ರಸ್ತೆಯ ಅಭಿವೃದ್ಧಿಗೆ ರಾಜ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆಯ 2023-24 ನೇ ಸಾಲಿನ 5054 ಅಪೆಂಡಿಕ್ಸ್ ಇ ಯೋಜನೆಯಡಿ ಅಂದಾಜು ರೂ. 2 ಕೋಟಿ ವೆಚ್ಚದಲ್ಲಿ ಪಟ್ಟಣದ ಹಂಜಗಿ ಮಿಲ್ದಿಂದ ಜೈನಾಪುರ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಕೂಡುವ ರಸ್ತೆಯ ಅಭಿವೃದ್ಧಿ ಪಡಿಸಲಾಗುತ್ತಿದೆ. ಬಸವಜನ್ಮ ಸ್ಥಳ ಬಸವನಬಾಗೇವಾಡಿ ಪಟ್ಟಣಕ್ಕೆ ಯಾವುದೇ ದಿಕ್ಕಿನಿಂದಲೂ ಬರುವ ಹಾಗೇ ರಸ್ತೆಗಳನ್ನು ನಿರ್ಮಾಣ ಮಾಡಲಾಗಿದೆ. ಮತಕ್ಷೇತ್ರದ ಎಲ್ಲ ಗ್ರಾಮಗಳ ಸಂಪರ್ಕ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಮುಂಬರುವ ದಿನಗಳಲ್ಲಿ ದಿಂಡವಾರ ಕ್ರಾಸ್ದಿಂದ ಬಸವನಬಾಗೇವಾಡಿ ಇರುವ ರಸ್ತೆಯನ್ನು ರೂ.26 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಮತಕ್ಷೇತ್ರದಲ್ಲಿ ಎಲ್ಲ ಕಾರ್ಯಗಳಿಗೆ ಆದ್ಯತೆ ನೀಡುವ ಮೂಲಕ ಮತಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಬದ್ಧ ಎಂದರು.
ಈ ಸಂದರ್ಭದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಲೋಕೋಪಯೋಗಿ ಇಲಾಖೆಯ ಎಇಇ ಜೆ.ವ್ಹಿ.ಕಿರಸೂರ, ಜಿಪಂ ಎಇಇ ವಸಂತ ರಾಠೋಡ, ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಪುರಸಭೆ ಮಾಜಿ ಸದಸ್ಯ ಗುರಲಿಂಗ ಬಸರಕೋಡ, ಟಿಎಪಿಎಂಎಸ್ ನಿರ್ದೇಶಕ ರವಿ ರಾಠೋಡ, ಬಸವೇಶ್ವರ ಸೇವಾ ಸಮಿತಿ ಉಪಾಧ್ಯಕ್ಷ ಬಸವರಾಜ ಹಾರಿವಾಳ ಇತರರು ಇದ್ದರು.