ಮಳೆ ಹಾನಿ ಪ್ರದೇಶಕ್ಕೆ ಶಾಸಕರ ಭೇಟಿ
ಬೀದರ್ :ಸೆ.4: ಮಳೆಯಿಂದಾಗಿ ಕೆಲವು ಒಳ ಪ್ರದೇಶಗಳಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿರುತ್ತವೆ ಮತ್ತು ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಜನರು ಸಮಸ್ಯೆ ಎದುರಿಸುತಿರುತ್ತಾರೆ ಅಂತಹ ದೂರು ಬಂದ ನಂತರ ಅಧಿಕಾರಿಗಳ ತಂಡ ಶೀಘ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳ ಅಹವಾಲು ಸ್ವೀಕರಿಸಿ ಸರ್ಕಾರಕ್ಕೆ ವರದಿ ಒದಗಿಸಿ ಜನರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಚಿಟ್ಟಾ, ಚಿಟ್ಟಾ ವಾಡಿ, ಗೋರನಳ್ಳಿ, ಅಮಲಾಪುರ ಪ್ರದೇಶಕ್ಕೆ ಶಾಸಕರು ಭೇಟಿ ನೀಡಿ
ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಹಾನಿಗೆuಟಿಜeಜಿiಟಿeಜಳಗಾದ ರಸ್ತೆ, ಮನೆಗೋಡೆ ಕುಸಿತ ಜನರ ಸಮಸ್ಯೆಗಳ ಅಹವಾಲು ಸ್ವೀಕರಿಸಿ ಪರಿಶೀಲನೆ ನಡೆಸಿ ಮಾತನಾಡಿದರು.
ನಮ್ಮ ಕ್ಷೇತ್ರದಲ್ಲಿ
ಹಲವೆಡೆ ಮಳೆ ಬಿದ್ದಿದ್ದರಿಂದ ಮನೆಗಳ ಗೋಡೆಗಳು ಕುಸಿದು ಬಿದ್ದಿರುವ ಅವಘಡಗಳು ಹೆಚ್ಚಾಗಿವೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಸರ್ಕಾರಕ್ಕೆ ವರದಿ ನೀಡಬೇಕು ಮಳೆ ಹಾನಿ ಕುರಿತು
ಅಧಿಕಾರಿಗಳ ಜೋತೆ ಅಂದಾಜು ವೆಚ್ಚ ತಯಾರಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು, ಚರಂಡಿ, ಸ್ವಚ್ಛತೆ, ಕುಡಿಯುವ ನೀರು ಇವುಗಳಿಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡುವ ಅಗತ್ಯವಿದೆ ಎಂದರು.
ಅಗತ್ಯ ತಾತ್ಕಾಲಿಕ ಕ್ರಮಕೈಗೊಳ್ಳಲು ಮುಖ್ಯಾಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರಲ್ಲದೇ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.
ಪ್ರತೀ ಮಳೆಗಾಲದಲ್ಲಿ ತೊಂದರೆ ಅನುಭವಿಸುತ್ತಿದ್ದೇವೆ ಎಂಬ ಸ್ಥಳಿಕರ ನಿವೇದನೆಗೆ ಶಾಸಕರು ಸ್ಪಂದಿಸಿ ಈ ತೊಂದರೆಗೆ ಶಾಶ್ವತ ಪರಿಹಾರ ಕ್ರಮಗಳ ಕುರಿತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊoದಿಗೆ ಚರ್ಚಿಸಿದರು. ಸೂಕ್ತ ಯೋಜನೆಯೊಂದನ್ನು ರೂಪಿಸಿ ಶಾಶ್ವತ ಕ್ರಮ ಕೈಕೊಳ್ಳುವ ಭರವಸೆ ನೀಡಿದರು.
ಬೀದರ್ ದಕ್ಷಿಣ ಕ್ಷೇತ್ರದ ಅಮಲಾಪುರ ಹಾಗೂ ಗೋರನಳ್ಳಿ ಗ್ರಾಮದ ಹೊರವಲಯದಲ್ಲಿರುವ ಎರಡು (ಎಸ್ ಟಿಪಿ) ಕೊಳಚೆ ನೀರು ಶುದ್ಧೀಕರಣ ಘಟಕದ ನೀರು ಸೋರಿಕೆಯಾಗುತ್ತಿರುವ ದೂರು ಬಂದ ಹಿನ್ನೆಲೆಯಲ್ಲಿ ನಗರಸಭೆ ಆಯುಕ್ತರ ಜೋತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಆಯುಕ್ತಕರಾದ ಶಿವರಾಜ ರಾಠೋಡ, ಲೋಕೋಪಯೋಗಿ ಇಲಾಖೆ ಎಇ 2 ಶಾಕೀರಾಜಾ, ಕಂದಾಯ ನಿರೀಕ್ಷಕ ರಾಜಕುಮಾರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪವನಕುಮಾರ, ಕಂದಾಯ ಇಲಾಖೆ ಗ್ರಾಮ ಅಧಿಕಾರಿ ಪ್ರದೀಪ್, ಗ್ರಾಮದ ಮುಖಂಡರು ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.