ಪ್ರಸ್ತುತ ಸ್ಪರ್ಧಾತ್ಮಕ ಹೆಚ್ಚಾಗಿರುವುದರಿಂದಕಂಪ್ಯೂಟರ್ ಶಿಕ್ಷಣ ಅನಿವಾರ್ಯ
ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ .ಸೆ..4 ಪ್ರಸ್ತುತ ದಿನಗಳಲ್ಲಿ ಸ್ಪರ್ಧಾತ್ಮಕ ಸ್ಪರ್ಧೆ ಹೆಚ್ಚಾಗಿರುವುದರಿಂದ  ಪ್ರತಿಯೊಬ್ಬರಿಗೂ ಕಂಪ್ಯೂಟರ್ ಶಿಕ್ಷಣ ಅನಿವಾರ್ಯವಾಗಿದೆ ಎಂದು ಮರಬ್ಬಿಹಾಳ್ ಗ್ರಾ.ಪಂ ಸದಸ್ಯ ಯಮುನಪ್ಪ ಎಂ.ಜಿ ಹೇಳಿದರು.
ತಾಲೂಕಿನ ನಾರಾಯಣದೇವರ ಕೆರೆ ಗ್ರಾಮದಲ್ಲಿ ಮಂಗಳವಾರ ಎಸ್.ಎಲ್.ಆರ್ ಮೆಟಾಲಿಕ್ಸ್ ಮತ್ತು ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ ಉಚಿತ ಕಂಪ್ಯೂಟರ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಸಿ ಮಾತನಾಡಿದರು.
ಗ್ರಾಮೀಣ ಭಾಗದ ಯುವಕ ಮತ್ತು ಯುವತಿಯರು ಕಂಪ್ಯೂಟರ್ ಶಿಕ್ಷಣದಿಂದ ವಂಚಿತರಾಗಿ – ಕಂಪ್ಯೂಟರ್ ಜ್ಞಾನ ಇಲ್ಲದೇ ಉದ್ಯೋಗ ಪಡೆಯು ವಲ್ಲಿ ವಿಫಲರಾಗುತ್ತಿದ್ದಾರೆ.
ನಾವು ಎಷ್ಟೇ ಶಿಕ್ಷಣ ಪಡೆದರೂ ಕಂಪ್ಯೂಟರ್ ಜ್ಞಾನ ಇಲ್ಲದಿದ್ದರೇ ಅನಕ್ಷರಸ್ಥರು ಇದ್ದ ಹಾಗೆ. ಹಾಗಾಗಿ ಉನ್ನತ ವಿದ್ಯಾಭ್ಯಾಸದ ಜತೆಗೆ ಕಂಪ್ಯೂಟರ್ ಜ್ಞಾನ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ ಎಂದರು
 ಗ್ರಾಮದ ಮುಖಂಡ ನಾಗಪ್ಪ ಮಾತನಾಡಿದರು
ಕಾರ್ಯಕ್ರಮದ ನಿರೂಪಾಣೆ ಗೋಪಿಕಾ, ಪ್ರಸ್ತಾವಿಕ ನುಡಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಅಧ್ಯಕ್ಷ ಭೀಮರಾಜ. ಯು, ಪ್ರಾರ್ಥನೆ ಗೀತೆ ಕುಮಾರಿ ವೀಣಾ ಮಾಡಿದರು.
ಈ ಸಂದರ್ಭದಲ್ಲಿ ಎಸ್.ಎಲ್.ಆರ್ ಕಂಪನಿಯ ಸಿಎಸ್.ಆರ್ ವಿಭಾಗದ ಮಾರುತಿ, ಐಟಿ ವಿಭಾಗದ ಗೋಕುಲ, ಗ್ರಾಮದ ಮುಖಂಡರಾದ ರವಿಕುಮಾರ್, ಕೆಂಗಪ್ಪ, ಸಂಸ್ಥೆಯ ಸಿಬ್ಬಂದಿಗಳಾದ ಭಾಗ್ಯ, ಇಂದಿರಾ ವಿದ್ಯಾರ್ಥಿಗಳಾದ ಪವಿತ್ರ, ಹೇಮಾ, ಉಮಾ ರಮೀಜಾ ಹಾಗೂ ಇನ್ನಿತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.