ಸರ್ಕಾರಿ ಶಾಲೆಗಳಿಗೆ ವಿವಿಧ ಉಪಕರಣಗಳು ವಿತರಣೆ
ಸಂಜೆವಾಣಿ ವಾರ್ತೆ
ಹರಪನಹಳ್ಳಿ.ಸೆ.೪: ಶ್ರೀ ಕುಮಾರಸ್ವಾಮಿ ಮಿನರಲ್ ಎಕ್ಸ್ಪೊರ್ಟ್ ಪ್ರವೇಟ್ ಲಿಮಿಟೆಡ್ ಬೆಂಗಳೂರು ಇವರ ವತಿಯಿಂದ ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿವಿಧ ಉಪಕರಣಗಳನ್ನು ವಿತರಿಸಲಾಯಿತು.ತಾಲೂಕಿನ ಅಳಿಗಂಚಿಕೇರಿ, ತಲವಾಗಲು, ಗುಂಡಗತ್ತಿ ಮತ್ತು ಯಡಿಹಳ್ಳಿ ಗ್ರಾಮಗಳ ಸರ್ಕಾರಿ ಶಾಲೆಗಳಿಗೆ ಕಂಪ್ಯೂಟರ್, ಪ್ರಿಂಟರ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕ(ಆರ್‌ಓ ಪ್ಲಾಂಟ್)ಗಳನ್ನು ಕೊಡುಗೆಯಾಗಿ ನೀಡಿದರು.ಈ ವೇಳೆ ಮಾತನಾಡಿದ ಎಸ್‌ಕೆಎಂಇಪಿಎಲ್‌ನ ಘಟಕದ ಮುಖ್ಯಸ್ಥ ಶಿರಬಿ ಪ್ರಕಾಶ್ ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿಯಡಿಯಲ್ಲಿ ನಮ್ಮ ಸಂಸ್ಥೆಯು ಇಂತಹ ಸೇವಾ ಕಾರ್ಯಗಳನ್ನು ಮಾಡುತ್ತಾ ಬಂದಿದೆ ಅದರಲ್ಲೂ ಗ್ರಾಮೀಣ ಪ್ರದೇಶದ ಭಾಗದಲ್ಲಿ ಮೂಲ ಸೌರ‍್ಯದ ಕೊರತೆ ಇರುವ ಸರ್ಕಾರಿ ಶಾಲೆಗಳಿಗೆ ನಮ್ಮ ಸಂಸ್ಥೆಯಿAದ ವಿವಿಧ ಉಪಕರಣಗಳನ್ನು ನೀಡಿದ್ದೇವೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಮಕ್ಕಳು ಇದ್ದರು.