ವೈದ್ಯಕೀಯ ಉಪಕರಣ ಖರೀದಿಯಲ್ಲಿ 117 ಕೋಟಿ ಭ್ರಷ್ಟಾಚಾರ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ದೇವೇಂದ್ರ ದೇಸಾಯಿ ಕಲ್ಲೂರ ಒತ್ತಾಯ
ಕಲಬುರಗಿ :ಅ.3: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪ ಕೇಳಿ ಬಂದಿದ್ದು, ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ಬಿಜೆಪಿಯ ಹಿಂದುಳಿದ ವರ್ಗ ಮೋರ್ಚಾದ ನಗರ ಜಿಲ್ಲಾ ಅಧ್ಯಕ್ಷ ದೇವೇಂದ್ರ ದೇಸಾಯಿ ಕಲ್ಲೂರ ಒತ್ತಾಯಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಹಗರಣ ನಡೆದಿದೆ ಎನ್ನಲಾಗಿದೆ. ರೋಗಿಗಳಿಗೆ ಆರೋಗ್ಯ ಸೇವೆಗೆ ರಾಜ್ಯದ ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ಬೆಂಗಳೂರು, ಮೈಸೂರು ಮೊದಲಾದ 18 ವೈದ್ಯಕೀಯ ಕಾಲೇಜುಗಳಿಗೆ 114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಉಪಕರಣಗಳನ್ನು ಖರೀದಿಸಿದ್ದು, 176.70 ಕೋಟಿ ಖರ್ಚು ಮಾಡಿದ್ದಾರೆ ಎನ್ನಲಾಗಿದೆ.
ಟೆಂಡರ್ ಕರೆಯಲು ಕಂಪೆನಿ ಹೆಸರನ್ನು ಬದಲಿಸಿದ್ದು, ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ. ವೈದ್ಯಕೀಯ ಶಿಕ್ಷಣ ಸಚಿವರು, ಈ ಹಗರಣದಲ್ಲಿ ಭಾಗವಹಿಸಿದ ಸುದ್ದಿ ಇದೆ. ಇದರಿಂದ ಸರಕಾರಕ್ಕೆ 117 ಕೋಟಿ ನಷ್ಟವಾಗಿದೆ. ಡಾ.ಶರಣಪ್ರಕಾಶ್ ಪಾಟೀಲ್, ಅಧಿಕಾರಿಗಳು, ಉಪಕರಣ ಸರಬರಾಜು ಮಾಡಿದ ಸಂಸ್ಥೆಗೆ ಇದರ ಲಾಭ ಆಗಿರುವ ಸಾಧ್ಯತೆ ಇದೆ. ಹಿಂದೆ 50 ಉಪಕರಣ ಪೂರೈಕೆ ಮಾಡಿದ ಕೇರಳ ವೈದ್ಯಕೀಯ ಸೇವಾ ನಿಗಮದ ಎಂ.ಎಸ್.ಕ್ರಿಯೇಟಿವ್ ಹೆಲ್ತ್ ಟೆಕ್ ಪ್ರೈವೆಟ್ ಲಿಮಿಡೆಟ್ ಸಂಸ್ಥೆ ಇದೇ ಮಾಡ್ಯುಲರ್ ಥಿಯೇಟರ್ ಉಪಕರಣಕ್ಕೆ ಪ್ರತಿಯೊಂದಕ್ಕೆ 49.70 ಲಕ್ಷದ (ಸುಮಾರು 50 ಲಕ್ಷ) ಟೆಂಡರ್‍ಗೆ ಹಾಕಿದ್ದರು. 3 ವರ್ಷ ವಾರಂಟಿ ಎಂದು ತಿಳಿಸಿದೆ.
ವಿವಿಧ ಖಾಸಗಿ ಪೂರಕೆದಾರರಿಂದ ಸುಮಾರು ಸುಮಾರು ರೂ. 176 ಕೋಟಿ ರೂಪಾಯಿಗಳಲ್ಲಿ ಆಪರೇಷನ್ ಥಿಯೇಟರ್ ಉಪಕರಣಗಳನ್ನು ಖರೀದಿಸಿದ್ದು, ಅದೆ ಉಪಕರಣಗಳಿಗೆ ಕೇರಳದ್ದಾದರೆ ಸುಮಾರು 50 ಲಕ್ಷದಲ್ಲಿ ಖರೀದಿ ಆಗುತ್ತಿತ್ತು. ಇದರಿಂದ ರಾಜ್ಯದ ಬೊಕ್ಕಸಕ್ಕೆ ಸುಮಾರು ರೂ. 117 ಕೋಟಿ ರೂಪಾಯಿಗಳ ನಷ್ಟವಾಗಿದ್ದು ಮೇಲ್ನೋಟಕ್ಕೆ ಕಂಡು ಬಂದಿದೆ. ಕೇರಳದ ಸಂಸ್ಥೆಗೆ ಹೋಲಿಸಿದರೆ ಸುಮಾರು 3 ಪಟ್ಟು ಹೆಚ್ಚು ದರಕ್ಕೆ ಕೊಟ್ಟಿದ್ದು, ಹಗರಣ ನಡೆಸಲಾಗಿದೆ ಎಂದರು.
ಒಂದು ಉಪಕರಣಕ್ಕೆ 1 ಕೋಟಿ ಲಾಭ ಸಿಗುತ್ತಿತ್ತು. 114 ಉಪಕರಣಕ್ಕೆ 117 ಕೋಟಿ ಅವ್ಯವಹಾರ ಆಗಿದೆ ಎನ್ನಲಾಗದೆ. ಟೆಂಡರ್ ನಲ್ಲಿ ಹತ್ತಾರು ಕೋಟಿ ಕಿಕ್ ಬ್ಯಾಕ್ ಸಂದಾಯವಾಗಿದೆ ಎನ್ನುವ ಅನುಮಾನ ಇದೆ. ಟೆಂಡರ್‍ನಲ್ಲಿ 4 ಕಂಪೆನಿಗಳು ಬಿಡ್ ಸಲ್ಲಿಸಿದ್ದು 3 ಕಂಪೆನಿಗಳನ್ನು ತಿರಸ್ಕರಿಸಿದ್ದಾರೆ. ಯಾವ್ಯಾವ ಕಂಪೆನಿ ಎಷ್ಟು ದರದ ಬಿಡ್ ಸಲ್ಲಿಸಿದ್ದವು ಎಂದು ಕೆಲವರು ಕೇಳಿದ್ದು ಮಾಹಿತಿ ಕೊಟ್ಟಿಲ್ಲ ಎಂದು ಆರೋಪಿಸಿದ ಅವರು 114 ಉಪಕರಣ ಖರೀದಿಯಲ್ಲಿ 117 ಕೋಟಿ ಮೊತ್ತದ ಭ್ರಷ್ಟಾಚಾರ ಆಗಿದೆ ಎಂದು ಅವರ ಕೂಡಲೇ ವೈದ್ಯಕೀಯ ಶಿಕ್ಷಣ ಸಚಿವರು ರಾಜಿನಾಮೆ ನೀಡಬೇಕು ಎಂದು ದೇವೇಂದ್ರ ದೇಸಾಯಿ ಒತ್ತಾಯಸಿದ್ದಾರೆ.