ಗಂಗೊಳ್ಳಿ ಠಾಣಾ ವ್ಯಾಪ್ತಿಯ ಅಂಚೆ ಕಛೇರಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಯ ಬಂಧನ
ಉಡುಪಿ ಜಿಲ್ಲೆಯ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮರವಂತೆ ಗ್ರಾಮದಲ್ಲಿ ಅಂಚೆ ಕಛೇರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣಾ ಪಿ ಎಸ್ ಐ ರವರಾದ ಹರೀಶ್ ಆರ್, ಮತ್ತು ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿಗಳಾದ ಸಂದೀಪ ಕುರಾಣಿ, ರಾಜು ನಾಯ್ಕ, ನಾಗರಾಜ ಹಾಗೂ ದಿನೇಶ್ ರವರ ತಂಡ ಸಿ.ಸಿ ಕ್ಯಾಮರಾದ ಪೂಟೇಜ್ ನ ಆಧಾರದ ಮೇಲೆ ಆರೋಪಿಯ ಪತ್ತೆಯ ಬಗ್ಗೆ ಮಾಹಿತಿ ಪಡೆದುಕೊಂಡು ದಿನಾಂಕ ೦೩.೦೯.೨೦೨೪ ರಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಭಟ್ಕಳ ಜಾಲಿ ರಸ್ತೆ ಕ್ರಾಸ್ ಎಂಬಲ್ಲಿ ಪ್ರಕ್ರಣದ ಆರೋಪಿ ಪೌಜಾನ್ ಅಹಮ್ಮದ್(೧೯ ) ತಂದೆ: ಮುಸ್ತಾಕ್ ಅಹಮ್ಮದ್, ಭಟ್ಕಳ ತಾಲೂಕು ಹಾಗೂ ಇನ್ನೊರ್ವ ಕಾನೂನು ಸಂಘರ್ಷಕ್ಕೋಳಗಾದ ಬಾಲಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯು ಕೃತ್ಯಕ್ಕೆ ಬಳಸಿದ ಏಂ ೩೦ ಐ ೦೦೯೭ ನಂಬ್ರದ ಟಿ.ವಿ.ಎಸ್ ಮೋಟಾರ್ ಸೈಕಲ್‌ನ್ನು ಸ್ವಾಧೀನ ಪಡಿಸಿಕೊಂಡು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.