ಗೌರಿ ಗಣೇಶ ಹಬ್ಬದ ಪ್ರಯುಕ್ತ ನಿಗಮದಿಂದ 250 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ
ಕಲಬುರಗಿ:ಸೆ.03:ಗೌರಿ ಗಣೇಶ ಹಬ್ಬದ ಪ್ರಯುಕ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಇದೇ ಸೆಪ್ಟೆಂಬರ್ 4 ರಿಂದ 6 ರವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ತಾಲ್ಲೂಕು/ಜಿಲ್ಲಾ ಕೇಂದ್ರಗಳಿಂದ ಬೆಂಗಳೂರಿಗೆ ಹಾಗೂ ಇತರೆ ಪ್ರಮುಖ ಸ್ಥಳಗಳಿಗೆ ಹಾಗೂ ಇದೇ ಸೆಪ್ಟೆಂಬರ್ 5 ರಿಂದ 7ರವರೆಗೆ ಬೆಂಗಳೂರಿನಿಂದ ಕ.ರಾ.ರ.ಸಾ.ನಿಗಮದ ವ್ಯಾಪ್ತಿಯ ವಿವಿಧ ಸ್ಥಳಗಳಿಗೆ ದೈನಂದಿನ ಕಾರ್ಯಾಚರಣೆಯಲ್ಲಿರುವ 202 ಸಾರಿಗೆಗಳನ್ನು ಹೊರತುಪಡಿಸಿ, 250 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ
ಹಬ್ಬ ಮುಗಿದ ನಂತರ ಇದೇ ಸೆಪ್ಟೆಂಬರ್ 8 ರಿಂದ 12 ರವರೆಗೆ ಕ.ಕ.ರ.ಸಾ ನಿಗಮದ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳಿಂದ ಬೆಂಗಳೂರು ಮತ್ತು ಇತರೆ ಸ್ಥಳಗಳಿಗೆ ಸಂಚಾರ ದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.