ಪ್ರತಿಭಾ ಪುರಸ್ಕಾರ,ನಿವೃತ್ತರಿಗೆ ಸನ್ಮಾನ
ಬಂಗಾರಪೇಟೆ, ಸೇ,೩:ಪಟ್ಟಣದ ವಿವೇಕಾನಂದ ನಗರದಲ್ಲಿರುವ ಕನಕ ಭವನದಲ್ಲಿ ಬಂಗಾರಪೇಟೆ ತಾಲ್ಲೂಕು ಮಡಿವಾಳರ ನೌಕರರ ಬಳಗವತಿಯಿಂದ ೨೦೨೩-೨೪ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಕೇಂದ್ರಬಿಂದುವಾದ ವಯೋನಿವೃತ್ತ ಎಇಇಜಿ. ನಾರಾಯಣಸ್ವಾಮಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ೧೨ನೇ ಶತಮಾನದ ಬಸವಣ್ಣನವರ ಸಮಕಾಲಿನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ, ಮೈಲಿಗೆಯನ್ನು ಮಡಿ ಮಾಡುವಂತಹ ವೃತ್ತಿಯಲ್ಲಿ ಜನಿಸಿದ ತಳ ಸಮುದಾಯದ ಒಬ್ಬ ವ್ಯಕ್ತಿ ೧೨ ನೇ ಶತಮಾನದಲ್ಲಿನ ಸಮಾಜದಲ್ಲಿದ್ದ ಕೆಲವು ಕೆಟ್ಟ ಮನಸ್ಥಿತಿಗಳ ಮನಸ್ಸುಗಳನ್ನು ತೊಳೆಯುವ ಕೆಲಸವನ್ನು ಮಡಿವಾಳ ಮಾಚಿದೇವರು ಮಾಡಿದ್ದಾರೆ.
ಈ ಸಮಾಜವನ್ನು ಸರಿದಾರಿಯಲ್ಲಿ ತರಬೇಕೆಂಬ ಆಶಯದಂತೆ ಎಲ್ಲಾ ಸಮುದಾಯವನ್ನು ಸಮಾನವಾಗಿ ಒಗ್ಗೂಡಿಸಿಕೊಂಡು ಹೋಗಬೇಕೆಂದು ಬಸವಣ್ಣನವರ ಆಶಯದಂತೆ ಮಾಚಿದೇವರು ಸಹ ಶ್ರಮಪಟ್ಟಂತವರು ಈಗಿನ ನಮ್ಮ ಸಮಾಜದಲ್ಲಿ ನಾವೆಲ್ಲರೂ ಉತ್ತಮ ಬಟ್ಟೆಯನ್ನು ತೊಡಗಿಕೊಂಡು ಬರುತ್ತೇವೆ ಎಂದರೆ ಅದಕ್ಕೆ ಮೂಲ ಕಾರಣಕಾರರು ನಮ್ಮ ಮಡಿವಾಳ ಸಮಾಜದವರು ಎಂದರೆ ತಪ್ಪಾಗಲಾರದು.
ಇಂತಹ ಸಮುದಾಯದಲ್ಲಿ ಹುಟ್ಟಿದ ನಾವು ಯಾವುದಕ್ಕೂ ಅಂಜದೆ ಕೆಳಗುಂದದೆ ವಿದ್ಯಾಭ್ಯಾಸದಲ್ಲಿ ಎಲ್ಲರಂತೆ ನಾವು ಸಹ ಮುಂಚೂಣಿಯಲ್ಲಿರಬೇಕು, ಸರ್ಕಾರದ ಉನ್ನತ ಉದ್ಯೋಗಗಳನ್ನು ಅಲಂಕರಿಸಿ ಸಮಾಜದಲ್ಲಿ ಸೇವೆ ಸಲ್ಲಿಸಬೇಕು ಐಎಎಸ್, ಕೆಎಎಸ್, ಐಪಿಎಸ್, ಡಾಕ್ಟರ್, ಇಂಜಿನಿಯರ್, ನ್ಯಾಯಾಧೀಶರ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿ ಉತ್ತೀರ್ಣರಾಗಿ ನಮ್ಮ ಮಡಿವಾಳ ಸಮುದಾಯದ ಘನತೆಯನ್ನು ಎತ್ತಿ ಹಿಡಿಯಬೇಕು, ಆಗ ಮಾತ್ರ ನಮ್ಮ ಸಮುದಾಯಕ್ಕೆ ಸಮಾಜದಲ್ಲಿ ಒಳ್ಳೆಯ ಹಿಡಿತ ಸಿಗಲಿದೆ, ಈಗಿನ ವಿದ್ಯಾರ್ಥಿಗಳು ಮೊಬೈಲ್ ಚಟಕ್ಕೆ ಬಿದ್ದು ಹೆಚ್ಚಿನ ಕಾಲ ಕಳೆಯುತ್ತಿದ್ದಾರೆ ಈ ಕೆಟ್ಟ ಪದ್ಧತಿಗೆ ತಿಲಾಂಜಲಿ ನೀಡಿ ವಿದ್ಯಾಭ್ಯಾಸದ ಕಡೆ ಗಮನ ಹರಿಸಿ ಎಂದರು.
ಮಡಿವಾಳ ನೌಕರರ ಬಳಗದ ವತಿಯಿಂದ ಸತತ ೮ ವರ್ಷಗಳಿಂದ ಸಮುದಾಯದ ವಿದ್ಯಾರ್ಥಿಗಳಿಗೆ ಹಿರಿಯ ಮುಖಂಡರಿಗೆ ನಿವೃತ್ತ ನೌಕರರಿಗೆ ಸನ್ಮಾನಿಸುತ್ತಿರುವ ಸಂಘದಎಲ್ಲಾ ಇಲಾಖೆಯ ನೌಕರರಿಗೆ ನನ್ನ ಅನಂತ ಧನ್ಯವಾದಗಳು ಎಂದರು.
ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ ಉಪನಿರ್ದೇಶಕರಾದ ಸಿ.ವಿ. ವೆಂಕಟೇಶ್ ರವರು ಮಾತನಾಡಿ ೧೨ನೇ ಶತಮಾನದ ಬಸವಣ್ಣನವರೆ ನಮಗೆ ಸ್ಪೂರ್ತಿಯಾಗಿದ್ದಾರೆ ಶಿಕ್ಷಣ ಮತ್ತು ಸಂಘಟನೆ ಸದೃಢ ಸಮಾಜಕ್ಕೆ ಮೂಲವಾಗಿವೆ ಹಿಂದಿನಗಿಂತ ಈಗಿನ ವಾತಾವರಣ ಉತ್ತಮವಾಗಿದೆ ಎಂದರು.
ಎಸ್‌ಎಸ್‌ಎಲ್‌ಸಿ. ಪಿಯುಸಿ ಹಾಗೂ ಉನ್ನತ ಶಿಕ್ಷಣದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಮುದಾಯದ ಹಿರಿಯ ಮುಖಂಡರಾದ ರಂಗನಾಥ್, ಕೋಲಾರ ಮಡಿವಾಳ ನೌಕರರ ಬಳಗದ ಅಧ್ಯಕ್ಷರಾದ ಮಂಜುನಾಥ್, ಖಜಾಂಚಿ, ಅಮರನಾಥ್, ಸಬ್ ರಿಜಿಸ್ಟರ್ ಆಫೀಸ್ ರಾಮಾಂಜಿ, ಬೆಸ್ಕಾಂ ಪ್ರಥಮ ಗುತ್ತಿಗೆದಾರರಾದ ಪರವನಹಳ್ಳಿ ವೆಂಕಟೇಶ್, ಶಿಕ್ಷಕರಾದ ಶ್ಯಾಮಮೂರ್ತಿ, ವೆಂಕಟಪ್ಪ, ಕೃಷ್ಣಪ್ಪ, ನಂಜುಂಡಪ್ಪ, ವೆಂಕಟರಾಮ್, ಸೀತಾರಾಮ್, ಮಂಜುನಾಥ್, ಆನಂದ್, ಮುರಳಿ, ಶಿಕ್ಷಕಿಯರಾದ ಲಕ್ಷ್ಮಮ್ಮ, ರಾಧಮ್ಮ, ಜಯಪದ್ಮ, ಶೋಭಾ ಹಾಗೂ ಸಮುದಾಯದ ಮುಖಂಡರು, ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು, ಪೋಷಕರು ಭಾಗವಹಿಸಿದ್ದರು.