ಸ.5 ರಂದು ತಾಲೂಕಾಮಟ್ಟದ ಶಿಕ್ಷಕರ ದಿನಾಚರಣೆ
ಬಾದಾಮಿ, ಸೆ3: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ಶಿಕ್ಷಕರ ದಿನೋತ್ಸವ-2024 ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮವನ್ನು ಸ.5 ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ಶ್ರೀ ವೀರಪುಲಿಕೇಶಿ ವಿದ್ಯಾವರ್ಧಕ ಸಂಸ್ಥೆಯ ಬಸವಮಂಟಪದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬಾದಾಮಿ ಮತಕ್ಷೇತ್ರದ ಶಾಸಕ, ಬಾಗಲಕೋಟೆ ತೋಟಗಾರಿಕೆ ವಿವಿ ವ್ಯವಸ್ಥಾಪನ ಮಂಡಳಿಯ ನಿರ್ದೇಶಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸರಕಾರದ ದೆಹಲಿಯ ಪ್ರತಿನಿಧಿ, ವಿಪ ಸದಸ್ಯ ಪ್ರಕಾಶ ಹುಕ್ಕೇರಿ, ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ, ಶಾಸಕ ಜೆ.ಟಿ.ಪಾಟೀಲ, ವಿಪ ಸದಸ್ಯರಾದ ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಜಿ.ಪಂ.ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಬಾದಾಮಿ ಪುರಸಭೆ ಅಧ್ಯಕ್ಷ ಪಾಂಡು ಕಟ್ಟೀಮನಿ, ಗುಳೇದಗುಡ್ಡ ಪುರಸಭೆ ಅಧ್ಯಕ್ಷೆ ಜ್ಯೋತಿ ಗೋವನಕೊಪ್ಪ, ಕೆರೂರ ಪ.ಪಂ.ಅಧ್ಯಕ್ಷೆ ನಿರ್ಮಲಾ ಮದಿ, ಬಾದಾಮಿ ಪುರಸಭೆ ಉಪಾಧ್ಯಕ್ಷೆ ಲಕ್ಷಿ?ಮೀಬಾಯಿ ಕಮ್ಮಾರ, ಕೆರೂರ ಪ.ಪಂ.ಉಪಾಧ್ಯಕ್ಷ ಮೊದಿನಸಾಬ ಚಿಕ್ಕೂರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ ಆಗಮಿಸುವರು. ಕಾರ್ಯಕ್ರಮದಲ್ಲಿ ಬಾದಾಮಿ ತಹಶೀಲದಾರ ಜೆ.ಬಿ.ಮಜ್ಜಗಿ, ಗುಳೇದಗುಡ್ಡ ತಹಶೀಲದಾರ ಮಂಗಳಾ ಎಂ, ತಾ.ಪಂ.ಇಒ ಮಲ್ಲಿಕಾರ್ಜುನ ಬಡಿಗೇರ ಭಾಗವಹಿಸುವರು. ಸಹಾಯಕ ಪ್ರಾಧ್ಯಾಪಕ ಡಾ.ಜಿ.ಜಿ.ಹಿರೇಮಠ ಅತಿಥಿ ಉಪನ್ಯಾಸ ನೀಡುವರು. ಅತಿಥಿಗಳಾಗಿ ಬಾದಾಮಿ ಮತ್ತು ಗುಳೇದಗುಡ್ಡ ತಾಲೂಕಿನ ಸರಕಾರಿ ನೌಕರರ ಸಂಘ, ರಾಜ್ಯ ಶಿಕ್ಷಣಾಧಿಕಾರಿಗಳ ಸಂಘ, ಪ್ರೌಢಶಾಲಾ ಸಹಶಿಕ್ಷಕರ ಸಂಘ, ರಾಜ್ಯ ಗ್ರೇಡ್-1 ದೈಹಿಕ ಶಿಕ್ಷಕರ ಸಂಘ, ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರಾಜ್ಯ ಗ್ರೇಡ್-2 ದೈಹಿಕ ಶಿಕ್ಷಕರ ಸಂಘ, ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ, ಎಸ್.ಸಿ, ಎಸ್.ಟಿ.ಶಿಕ್ಷಕರ ಸಂಘ, ರಾಜ್ಯ ವಿಶೇಷ ಚೇತನರ ಶಿಕ್ಷಕರ ಸಂಘ, ರಾಜ್ಯ ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಸರ್ವಸದಸ್ಯರು ಭಾಗವಹಿಸುವರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್.ಹಳಗೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ದೊಡ್ಡಪ್ಪನ್ನವರ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.