ಸೆ. 9 ರಂದು ತ್ರೈಮಾಸಿಕ ಕೆ.ಡಿ.ಪಿ. ಸಭೆ
ಕಲಬುರಗಿ:ಸೆ.2:ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ.) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಸೆಪ್ಟೆಂಬರ್ 9 ರಂದು ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.