ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ
ಕಲಬುರಗಿ:ಸೆ.2:ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಸೆಪ್ಟೆಂಬರ್ 3 ರಂದು ಮಂಗಳವಾರ ಬೆಳಿಗ್ಗೆ 9.30 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಅಂದು ಬೆಳಿಗ್ಗೆ 11 ಗಂಟೆಗೆ ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅತೀವೃಷ್ಠಿಗೆ ಸಂಬಂಧಪಟ್ಟಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಸೇಡಂ ತಾಲೂಕಿನಾದ್ಯಂತಹ ಅತೀವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 4 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಮೈದಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ಧರ್ಮಸ್ಥಳ ಹಾಗೂ ಯುನಿಸೇಫ್ (UಓIಅಇಈ) ಸಂಸ್ಥೆಯ ವತಿಯಿಂದ ನೀರಿನ ಸಂರಕ್ಷಣೆಗಾಗಿ ಯುವ ಜನತೆಯ ಕಾರ್ಯೋನ್ಮುಖತೆ ಕಾರ್ಯಕ್ರಮ, ಜನಜಾಗೃತಿ ಕಾರ್ಯಕ್ರಮ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಸೇಡಂ ಸ್ಥಳೀಯ ಹಾಗೂ ಮಧ್ಯಾಹ್ನ 3.30 ಗಂಟೆಗೆ ಸೇಡಂ ಪುರಸಭೆ ಅಧ್ಕಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಭಾಗವಹಿಸಿ, ಕಲಬುರಗಿಯಲ್ಲಿ ವಾಸ್ತವ್ಯ ಮಾಡುವರು.
ಸೆಪ್ಟೆಂಬರ್ 5 ರಂದು ಗುರುವಾರ ಬೆಳಿಗ್ಗೆ 9.45 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.