ಹುಬ್ಬಳ್ಳಿಯಲ್ಲಿ ರೌಡಿ ಪೆರೇಡ್; ಕಮೀಷನರ್ ಎಚ್ಚರಿಕೆ!
ಹುಬ್ಬಳ್ಳಿ, ಸೆ. ೨- ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಹು-ಧಾ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ರೌಡಿಗಳ ಪರೇಡ್ ಸೋಮವಾರ ನಡೆಸಲಾಯಿತು.
ಹು-ಧಾ ಅವಳಿನಗರದ 15 ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 862 ರೌಡಿಗಳಿಗೆ ಫರೇಡ್ ನಡೆಸಲಾಯಿತು.
ಈ ವೇಳೆ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ನಿಮಿತ್ತವಾಗಿ ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ಮುಲಾಜಿಲ್ಲದೆ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಹು-ಧಾ ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ ಆಯಾ ಠಾಣೆಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
