ಸತ್ಯ, ಅಹಿಂಸೆ ಆಧಾರಿತ ಗಾಂಧೀ ಪ್ರಣಿತ ಭಾರತವೇ ನಮ್ಮ ಆದ್ಯತೆ: ಸಚಿವ ಸಂತೋಷ ಲಾಡ್
ಧಾರವಾಡ,ಅ 3: ರಾಷ್ಟ್ರಪಿತ ಮಹಾತ್ಮಗಾಂಧೀ ಅವರು ನೀಡಿರುವ ಸತ್ಯ, ಅಹಿಂಸೆ ಆಧಾರಿತ ಗಾಂಧೀ ಪ್ರಣಿತ ಭಾರತವೇ ನಮ್ಮ ಆದ್ಯತೆ, ಗಾಂಧೀಜಿ ಅವರ ಜೀವನ ಮೌಲ್ಯಗಳು ನಮಗೆ ದಾರಿದೀಪವಾಗಿವೆ ಎಂದು ರಾಜ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಹೇಳಿದರು.
ಅವರು ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿಯವರ 155ನೇ ಜಯಂತಿ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜನ್ಮ ದಿನದ ನಿಮಿತ್ಯ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿ ಮಾತನಾಡಿದರು.
ಇಂದಿನ ಭಾರತಕ್ಕೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನ ಮತ್ತು ಸಾಧನೆಗಳು ಅಗತ್ಯವಾಗಿವೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಭಾರತೀಯ ಆಡಳಿತ ವ್ಯವಸ್ಥೆ ಗಾಂಧೀಜಿ ಅವರು ಬೋಧಿಸಿದ, ಅಳವಡಿಸಿಕೊಂಡು ಆಚರಿಸಿದ ತತ್ವ ಸಂದೇಶಗಳನ್ನು ಅನುಸರಿಸಿದೆ. ಸತ್ಯ, ಹಿಂಸೆ, ಸಾಮರಸ್ಯ, ಸಹಬಾಳ್ವೆ ಮತ್ತು ಪರಸ್ಪರ ಪ್ರೀತಿ ವಿಶ್ವಾಸದ ಬದುಕಿಗೆ ಗಾಂಧೀಜಿ ಅವರ ಜೀವನ ಮೌಲ್ಯಗಳು ಮೂಲಭೂತ ಅಗತ್ಯವಾಗಿವೆ ಎಂದು ಹೇಳಿದರು.
ಪೆÇಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು. ಗಾಂಧಿ ಚಿಂತಕ ಡಾ. ಸಂಜೀವ್ ಕುಲಕರ್ಣಿ ಅವರು ಮಹಾತ್ಮಾ ಗಾಂಧೀಜಿ ಅವರ ಜೀವನ ಸಂದೇಶಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸ್ವಾಗತಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಅವರು ವಂದಿಸಿದರು. ಕಲಾವಿದ ರವಿ ಕುಲಕರ್ಣಿ ಅವರು ಕಾರ್ಯಕ್ರಮ ನಿರೂಪಿಸಿದರು.