ಬೀದರದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ:ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ, ಸೆ.02: ನಾಗರೀಕ ಕೇಂದ್ರಿತ ಸುಧಾರಣೆಗಳ ಪ್ರಕಾರ ಸರ್ಕಾರದಿಂದ ಘೋಷಿಸಿದಂತೆ ಜಿಲ್ಲೆಯಾದ್ಯಂತ ಸ್ಥಿರಾಸ್ತಿಯನ್ನು ಜಿಲ್ಲೆಯ ಯಾವುದೇ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಮಾಡಲು ಅನುಕೂಲವಾಗುವಂತೆ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಗೊಳಿಸಲಾಗಿದೆ.
ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ 2024 ರಲ್ಲಿ ನೋದಂಣಿ ಕಾಯ್ದೆದ 1908ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಜಾರಿಗೆ ಅನುಷ್ಠಾನಗೊಳಿಸಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಬೀದರ ಜಿಲ್ಲೆಯ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲಾಗಿದೆ.
ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಛೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಭವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಛೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಛೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಕಡಿಮೆಯಾಗುತ್ತದೆ. ಕಛೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ. ಕಛೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಛೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.
ಆದ್ದರಿಂದ ಸಾರ್ವಜನಿಕರು ಎನಿವೇರ್ ನೋದಂನಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಛೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.